Breaking News

ಹುಣಸನಹಳ್ಳಿ ಬಾರ್ ಬಳಿ‌ ಭೀಕರ ಕೊಲೆ!12 ಮಂದಿಗೆ ಜೀವಾವಧಿ ಶಿಕ್ಷೆ.

ತಮಿಳುನಾಡು ಮೂಲದ ಶಂಕರ ಎಂಬಾತನನ್ನ ಬಾರ್ ಮುಂದೆ ಅಟ್ಟಾಡಿಸಿ ಕೊಲೆ ಮಾಡಲಾಗಿತ್ತು. ಜಮೀನು ವಿಚಾರವಾಗಿ ದಾಯಾದಿಗಳ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿತ್ತು.ಪ್ರಕರಣ ಸಂಬಂಧ ಕೋಡಿಹಳ್ಳಿ ಪೊಲೀಸ್ ಠಾಣೆಯಲ್ಲಿ 17 ಜನರ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿತ್ತು. ಅಂದಿನ ಸರ್ಕಲ್ ಇನ್ಸ್​ಪೆಕ್ಟರ್ ಟಿಟಿ ಕೃಷ್ಣ ಅವರು ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. 5 ಜನ ಆರೋಪಿಗಳು ಪರಾರಿಯಾಗಿದ್ದು, ಉಳಿದ 12 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕೊಲೆ ಆರೋಪ ಸಾಬೀತಾದ ಹಿನ್ನೆಲೆ 12 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 1 ಲಕ್ಷ ರೂ ದಂಡ ವಿಧಿಸಿ ಆದೇಶ ಹೊರಡಿಸಲಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *