ಬಾವಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಬಾವಿಯ ಬಳಿ ರಕ್ತ ಮಿಶ್ರಿತ ಬಟ್ಟೆಗಳು, ಪಾದರಕ್ಷೆ, ಪರ್ಸ್ ಪತ್ತೆಯಾಗಿತ್ತು. ಸ್ಥಳೀಯರು ನೀಡಿದ ಮಾಹಿತಿಯಂತೆ ಮಂಜೇಶ್ವರ ಪೊಲೀಸರು ಸ್ಥಳಕ್ಕೆ ತಲುಪಿ ಪರ್ಸ್ ತೆರೆದು ನೋಡಿದಾಗ ಮೃತಪಟ್ಟ ವ್ಯಕ್ತಿಯ ಭಾವಚಿತ್ರ ಹಾಗೂ ದಾಖಲೆ ಪತ್ರಗಳು ಕಂಡು ಬಂದಿವೆ. ಈ ಬಗ್ಗೆ ಮಂಜೇಶ್ವರ ಪೊಲೀಸರು ಮೂಲ್ಕಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ವೇಳೆ ಮೊಹಮ್ಮದ್ ಶರೀಫ್ ನಾಪತ್ತೆಯಾದ ಬಗ್ಗೆ ಕೇಸು ದಾಖಲಾಗಿರುವ ವಿಷಯ ತಿಳಿದು ಬಂದಿದೆ. ವಿಷಯ ತಿಳಿದು ಸಂಬಂಧಿಕರು ಸ್ಥಳಕ್ಕೆ ತಲುಪಿ ಆಟೋ ರಿಕ್ಷಾ ನಾಪತ್ತೆಯಾದ ವ್ಯಕ್ತಿಯದ್ದೆಂದು ದೃಢೀಕರಿಸಿದ್ದಾರೆ. ಇದೇ ವೇಳೆ ಕೊಲೆ ಆರೋಪಿಗಳನ್ನು ಪತ್ತೆ ಹಚ್ಚಲು ಮಂಜೇಶ್ವರ ಪೊಲೀಸ್ ಇನ್‌ಸ್ಪೆಕ್ಟರ್ ಇ. ಅನೂಪ್ ಕುಮಾರ್ ನೇತೃತ್ವದಲ್ಲಿ ತನಿಖೆ ತೀವ್ರಗೊಳಿಸಲಾಗಿದೆ. ಹಲವರನ್ನು ವಿಚಾರಣೆ ನಡೆಸಿದರೂ ಆರೋಪಿಗಳ ಕುರಿತು ಯಾವುದೇ ಮಾಹಿತಿ ಲಭಿಸಿಲ್ಲ. ಬುಧವಾರ ರಾತ್ರಿ ಮಂಗಳೂರಿನಿಂದ ಮೂರು ಮಂದಿ ಮೊಹಮ್ಮದ್ ಶರೀಫ್ ಅವರ ಆಟೋ ರಿಕ್ಷಾದಲ್ಲಿ ಪ್ರಯಾಣಿಸಿದ ಮಾಹಿತಿ ಲಭಿಸಿದೆ. ಅವರನ್ನು ಪತ್ತೆಹಚ್ಚಲು ಶೋಧ ನಡೆಯುತ್ತಿದೆ. ಮಂಗಳೂರಿನಿಂದ ಮಂಜೇಶ್ವರದ ವರೆಗೆ ರಸ್ತೆ ಬದಿ ಸ್ಥಾಪಿಸಿರುವ ಸಿಸಿಟಿವಿ ಕೆಮರಾಗಳ ದೃಶ್ಯಗಳನ್ನು ಪರಿಶೀಲಿಸಲು ಪೊಲೀಸರು ನಿರ್ಧರಿಸಿದ್ದಾರೆ. ಸ್ಥಳದ ಕುರಿತು ಅರಿವು ಇದ್ದವರೇ ಈ ಕೊಲೆ ಕೃತ್ಯದ ಹಿಂದಿರಬಹುದೆಂದು ಸಂಶಯ ಮೂಡಿದೆ. ಕೊಲೆ ಪ್ರಕರಣದ ಕುರಿತು ಕರ್ನಾಟಕ ಪೊಲೀಸರು ಕೂಡ ತನಿಖೆ ನಡೆಸುತ್ತಿದ್ದಾರೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

