Breaking News

ಮಹದೇಶ್ವರ ದೇಗುಲದ ಗೋಪುರ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ!!

ಮಲೆ ಮಹದೇಶ್ವರ ದೇಗುಲದ ಗೋಪುರವನ್ನು ಹತ್ತಿ ವ್ಯಕ್ತಿಯೊಬ್ದ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಂದು ಮುಂಜಾನೆ ನಡೆದಿದೆ.ಅರೆಬರೆ ಬಟ್ಟೆಯಲ್ಲಿರುವ ವ್ಯಕ್ತಿಯೊಬ್ಬ ಗೋಪುರವನ್ನು ಹತ್ತಿ ಕೆಳಗಿದ್ದವರನ್ನು ಆತಂಕದಲ್ಲಿ ತಳ್ಳಿದ್ದಾನೆ. ಕೊನೆಗೂ ಆತನ ಮನವೊಲಿಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಅಲ್ಲಿದ್ದ ಭಕ್ತಾದಿಗಳು ಆತನನ್ನು ಕೆಳಗೆ ಬೀಳದಂತೆ ಬೇಡಿಕೊಂಡರೂ ಸಹ ಆತ ಗೋಪುರದ ಕಲಶದವರೆಗೂ ಹತ್ತಿದ್ದಾನೆ.ವಿನಯ್‌ ಆಚಾರ್ಯ ಎಂಬುವವರು ಈ ಪ್ರಕರಣದ ದೃಶ್ಯವನ್ನು ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಹಂಚಿಕೊಂಡಿದ್ದು ಪ್ರಕರಣದ ಸತ್ಯಾಸತ್ಯತೆ ಹಾಗೂ ವ್ಯಕ್ತಿಯ ಹಿನ್ನೆಲೆ ಪೊಲೀಸರಿಂದ ಇನ್ನಷ್ಟೇ ತಿಳಿದು ಬರಬೇಕಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *