Breaking News

4 ತಿಂಗಳ ಹಿಂದೆ ಉದ್ಘಾಟನೆಯಾಗಿದ್ದ ಹುಬ್ಬಳ್ಳಿ ಹಳೇ ಬಸ್ ನಿಲ್ದಾಣ ಮತ್ತೆ 4 ತಿಂಗಳು ಬಂದ್!!

ಕಳೆದ ನಾಲ್ಕು ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿದ್ದ ಚೆನ್ನಮ್ಮ ವೃತ್ತದ ಬಳಿಯ ಫ್ಲೈ ಓವರ್ ಕಾಮಗಾರಿ ತ್ವರಿತಗತಿಯಲ್ಲಿ ನಡೆಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಮೆಲ್ಸೇತುವೆ ಕಾಮಗಾರಿ ತ್ವರಿತಗೊಳಿಸುವ ಸಂಬಂಧ ಏ. 20ರಿಂದ ನಾಲ್ಕು ತಿಂಗಳ ಹಿಂದಷ್ಟೆ ಹೊಸದಾಗಿ ನಿರ್ಮಿಸಿರುವ ಹಳೇ ಬಸ್ ನಿಲ್ದಾಣವನ್ನು ಬಂದ್ ಮಾಡಲು ನಿರ್ಧರಿಸಲಾಗಿದೆ.ಬಸವವನದಿಂದ ಚನ್ನಮ್ಮ ವೃತ್ತದವರೆಗೆ 500 ಮೀಟರ್, ಚನ್ನಮ್ಮ ವೃತ್ತದಿಂದ ಹಳೇ ಕೋರ್ಟ್ ವೃತ್ತದವರೆಗೆ 150 ಮೀಟರ್ ಕಾಮಗಾರಿ ನಡೆಯಲಿದೆ. ಹೀಗಾಗಿ ಹಳೇ ಬಸ್ ನಿಲ್ದಾಣ ತಾತ್ಕಾಲಿಕವಾಗಿ ಸ್ಥಳ ಬದಲಾವಣೆ ಮಾಡಿ ಐಟಿ ಪಾರ್ಕ್ ಹತ್ತಿರ ತಾತ್ಕಾಲಿಕ ಬಸ್ ನಿಲ್ದಾಣ ಸ್ಥಾಪಿಸಲಾಗುತ್ತಿದೆ.ನೂತನವಾಗಿ ನಿರ್ಮಿಸಿರುವ ಹಳೇ ನಿಲ್ದಾಣ ಹಲವು ವಿಶಿಷ್ಟ್ಯತೆಗಳಿಂದ ಕೂಡಿದೆ.‌ ಇತ್ತೀಚೆಗಷ್ಟೇ ಕಾರ್ಯರಂಭ ಮಾಡಿದ್ದರಿಂದ ಸಾಕಷ್ಟು ಬೆಲೆ ಬಾಳುವ ಪರಿಕರಗಳು ಹಾಗೂ ಬಿಆರ್​ಟಿಎಸ್​ ಬಸ್ ನಿಲ್ದಾಣದ ಕೊಠಡಿಗಳು ಸೇರಿದಂತೆ ಹಲವು ಉಪಕರಣಗಳು ಹೊರಗಡೆ ಇವೆ. ಅವುಗಳ ರಕ್ಷಣೆ ಪ್ರಮುಖ ಸವಾಲಾಗಿದೆ. ಅದಲ್ಲದೇ ಕಳ್ಳರ ಕಾಟ, ಕಿಡಿಗೇಡಿಗಳು ಹಾನಿಯನ್ನುಂಟು ಮಾಡುವ ಆತಂಕ ಇದೆ. ಹೀಗಾಗಿ ಭದ್ರತೆ ಹೆಚ್ಚಿಸುವ ಅವಶ್ಯಕತೆ ಇದೆ.ಇದರ ನಿರ್ವಹಣೆಯನ್ನು ವಾಯುವ್ಯ ಸಾರಿಗೆ ಸಂಸ್ಥೆ ನೋಡಿಕೊಳ್ಳುತ್ತಿದ್ದು, ಹೆಚ್ಚಿ‌ನ ಸಿಬ್ಬಂದಿ ‌ನಿಯೋಜಿಸುವ ವಿಶ್ವಾಸವಿದೆ” ಎಂದು ಮಾಹಿತಿ ‌ನೀಡಿದರು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *