Breaking News

ಮೈಕ್ರೋ ಫೈನಾನ್ಸ್ ಕಂಪನಿ ಕಿರುಕುಳಕ್ಕೆ ಬೇಸತ್ತೆ ವ್ಯಕ್ತಿ ಆತ್ಮಹತ್ಯೆಗೆ ಯತ್ನ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಅಬ್ದುಲ್ ಸತ್ತಾರ್ ಎಂಬುವರು ಕಳೆದ ಒಂದೂವರೆ ವರ್ಷಗಳ ಹಿಂದೆ ಎಕ್ಟೀಕಾಸ್ ಸ್ಮಾಲ್ ಫೈನಾನ್ಸ್ ನಿಂದ 5 ಲಕ್ಷ ಸಾಲ ಪಡೆದಿದ್ದರು. ಈ ಹಿಂದಿನ ಕಂತುಗಳನ್ನು ಕಟ್ಟಿದ್ದಂತ ಅವರು, ಕಳೆದ ಮಾರ್ಚ್ ತಿಂಗಳ ಕಂತಿನ ಹಣ ರೂ.11,400 ಕಟ್ಟೋದಕ್ಕೆ ಸಾಧ್ಯವಾಗಿರಲಿಲ್ಲ. ಫೈನಾನ್ಸ್ ಕಂಪನಿಯಿಂದ ದಿನಂಪ್ರತಿ ಸಾಲದ ಕಂತಿನ ಹಣ ಕಟ್ಟುವಂತೆ ಕಿರುಕುಳ ನೀಡುತ್ತಿದ್ದರು. ಇದೇ ಕಿರುಕುಳಕ್ಕೆ ಬೇಸತ್ತೆ ಇಂದು ಅಬ್ದಲ್ ಸುತ್ತಾರ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಕೂಡಲೇ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *