ಸೈಬರ್ ವಂಚಕರು ಹೊಸ ಹೊಸ ರೂಪದಲ್ಲಿ ಜನರನ್ನು ಮೋಸದ ಬಲೆಗೆ ಬೀಳಿಸುತ್ತಲೇ ಇದ್ದಾರೆ.ವ್ಯಕ್ತಿಯೊಬ್ಬರ ವಾಟ್ಸ್‌ಆಯಪ್‌ಗೆ ₹1,000 ಮೊತ್ತದ ಟ್ರಾಫಿಕ್ ಚಲನ್ ಇರುವ ಪಿಡಿಎಫ್ ಫೈಲ್ ಮಾದರಿಯ ಎಪಿಕೆ ಫೈಲ್ ಬಂದಿದೆ. ಇದರಲ್ಲಿ ಕರ್ನಾಟಕ ಸರ್ಕಾರದ ಚಿಹ್ನೆಯೂ ಕಂಡಿದ್ದರಿಂದ, ಲಿಂಕ್ ನಂಬಿದ ವ್ಯಕ್ತಿ ಅದರ ಮೇಲೆ ಕ್ಲಿಕ್ ಮಾಡಿದ್ದಾರೆ. ಬಳಿಕ ಬ್ಯಾಂಕ್ ಖಾತೆಯಿಂದ ಹಂತ- ಹಂತವಾಗಿ ಹಣ ಕಡಿತಗೊಂಡಿದ್ದರೂ ಅವರ ಗಮನಕ್ಕೆ ಬಂದಿಲ್ಲ.ಮೂರು ಬ್ಯಾಂಕ್ ಖಾತೆಗಳಿಂದ ಒಟ್ಟು ₹7.42 ಲಕ್ಷ ಹಣ ಕಡಿತವಾಗಿರುವುದು ಗೊತ್ತಾಗಿದೆ. ಈ ಬಗ್ಗೆ ಅವರು ದೂರು ದಾಖಲಿಸಿದ್ದು, ಅಪರಿಚಿತರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಆನ್‌ಲೈನ್ ಮೂಲಕ ವಂಚನೆ ಪ್ರಕರಣಗಳು ಹೆಚ್ಚುತ್ತಿವೆ. ಇತ್ತೀಚೆಗೆ ಟೆಲಿಗ್ರಾಮ್ ಮುಖಾಂತರ ಪರಿಚಯಿಸಿಕೊಂಡ ಸೈಬರ್ ಆರೋಪಿಗಳು ಆನ್‌ಲೈನ್ ಮೂಲಕ ಟಾಸ್ಕ್‌ಗಳನ್ನು ಮುಗಿಸಿದರೆ ಹೆಚ್ಚಿನ ಲಾಭ ಪಡೆಯಬಹುದು ಅಂದು ನಂಬಿಸಿ ಹಣ ದೋಚಿದ್ದಾರೆ. ಇಂತಹ ಜಾಲದಿಂದ ಎಚ್ಚರದಿಂದ ಇರಬೇಕು ಎಂದು ಪೊಲೀಸರು ಸಲಹೆ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

