Breaking News

ಸಿನಿಮಾಗಳಲ್ಲಿ ನಟಿಸಿದ್ದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ಇನ್ನಿಲ್ಲ!!

ಕನ್ನಡದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ಮಧ್ಯರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 75 ವರ್ಷದ ಬ್ಯಾಂಕ್ ಜನಾರ್ಧನ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆ ಕುಟುಂಬಸ್ಥರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ.ಕನ್ನಡ ಚಿತ್ರರಂಗದಲ್ಲಿ ಹಾಸ್ಯ ನಟರಾಗಿ ಗುರುತಿಸಿಕೊಂಡ ಇವರು, ದೊಡ್ಡಣ್ಣ, ಟೆನ್ನಿಸ್‌ ಕೃಷ್ಣ ಅವರ ಸಮಕಾಲೀನರು ಅವರೊಂದಿಗೆ ಮಾತ್ರವಲ್ಲದೆ, ತಮ್ಮ ನಂತರ ಬಂದ ಹಾಸ್ಯನಟರಾದ ಸಾಧುಕೋಕಿಲ, ಬುಲೆಟ್‌ ಪ್ರಕಾಶ್‌ ಸೇರಿದಂತೆ ಇನ್ನೂ ಹಲವರೊಂದಿಗೆ ನಟಿಸಿ ತಮ್ಮ ಛಾಪು ಮೂಡಿಸಿದ್ದರು. 2005ರ ನ್ಯೂಸ್‌, 1993ರ ಶ್‌ ಹಾಗೂ 1992ರಲ್ಲಿ ಬಿಡುಗಡೆಯಾದ ತರ್ಲೆ ನನ್ಮಗ ಚಿತ್ರದಲ್ಲಿನ ಇವರ ಪಾತ್ರಗಳನ್ನು ಇಂದಿಗೂ ಜನ ನೆನಪಿಸಿಕೊಳ್ಳುತ್ತಾರೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *