Breaking News

ವಾಚ್‌ಮನ್‌ ಬರ್ಬರ ಕೊಲೆ; ಮೂವರ ಬಂಧನ!

ಜಮೀನಿನಲ್ಲಿ ಮದ್ಯಪಾನ ಮಾಡಲು ಅವಕಾಶ ನೀಡದ 50 ವರ್ಷದ ವಾಚ್‌ಮನ್‌ನನ್ನು ಮೂವರು ಆರೋಪಿಗಳು ಕೊಲೆ ಮಾಡಿರುವ ಘಟನೆ ಕೆಂಗೇರಿ ಬಳಿಯ ವಡೇರಹಳ್ಳಿಯಲ್ಲಿ ಬುಧವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಮಹೇಶ್ ಹಾಗೂ ಮೋಹನ್ ವೃತ್ತಿಯಲ್ಲಿ ಚಾಲಕರಾಗಿದ್ದು, ಪುನೀತ್ ನಿರುದ್ಯೋಗಿಯಾಗಿದ್ದಾನೆಂದು ತಿಳಿದುಬಂದಿದೆ. ಮೂವರು ಆರೋಪಿಗಳು ಮದ್ಯದ ಬಾಟಲಿಗಳೊಂದಿಗೆ ಜಮೀನಿನ ಬಳಿ ಬಂದಿದ್ದು, ಜಮೀನು ಪ್ರವೇಶಿಸಲು ಮುಂದಾಗಿದ್ದಾರೆ. ಈ ವೇಳೆ ಕಾವಲು ಕಾಯುತ್ತಿದ್ದ ನಾಗರಾಜು(50) ಅವರು ನಿರಾಕರಿಸಿದ್ದು, ಬಳಿಕ ಆರೋಪಿಗಳು ಮರದ ಹಲಗೆಯಿಂದ ಹಲ್ಲೆ ನಡೆಸಿದ್ದಾರೆ. ಬಳಿಕ ನಾಗರಾಜು ಅವರ ಮೊಬೈಲ್ ಕಸಿದು ಸ್ಥಳದಿಂದ ಪರಾರಿಯಾಗಿದ್ದಾರೆ. ಬಳಿಕ ಸ್ಥಳೀಯರು ನಾಗರಾಜು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲು ಮುಂದಾಗಿದ್ದು, ಈ ವೇಳೆ ಮಾರ್ಗದ ಮಧ್ಯೆಯೇ ನಾಗರಾಜು ಅವರು ಕೊನೆಯುಸಿರೆಳೆದಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *