Breaking News

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ..

ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಂದ ಮುಖ್ಯಮಂತ್ರಿ ಸಿದ್ರಾಮಯ್ಯ ರವರು ಬಿಜೆಪಿಗೆ ನಮ್ಮ ಸರ್ಕಾರವನ್ನು ಪ್ರಶ್ನಿಸುವ ಹಕ್ಕು ಇಲ್ಲ,
ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆ ಹೆಚ್ಚಿದ್ದು, ಬಿಜೆಪಿಯವರು ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಹೊಂದಿಲ್ಲ ಎಂದು ತಿಳಿಸಿದರು.ರಾಜ್ಯಾದ್ಯಂತ ಬಿಜೆಪಿಯವರು ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪೆಟ್ರೋಲ್ , ಡೀಸೆಲ್, ಗ್ಯಾಸ್ ಬೆಲೆ ಸೇರಿದಂತೆ ಅವಶ್ಯಕ ವಸ್ತುಗಳ ಬೆಲೆ ಏರಲು ಕಾರಣ ಕೇಂದ್ರದ ಬಿಜೆಪಿ ಸರ್ಕಾರದವರೇ, ರಾಜ್ಯಸರ್ಕಾರ ಹೆಚ್ಚಿಸಿರುವ ಹಾಲಿನ ದರದಿಂದ ರೈತರಿಗೆ ಲಾಭ ಹೋಗುತ್ತದೆ. ಪೆಟ್ರೋಲ್ ಹಾಗೂ ಡೀಸೆಲ್ ನ ಕಚ್ಚಾ ತೈಲದ ಬೆಲೆಯ ಮೇಲೆ ದರ ನಿಗದಿಯಾಗುತ್ತದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಒಂದು ಬ್ಯಾರೆಲ್ ಕಚ್ಚಾ ತೈಲಕ್ಕೆ 120 ಡಾಲರ್ ಇದ್ದು, ಈಗ 65 ಡಾಲರ್ ಗೆ ಇಳಿದಿದೆ. ಅಂದು ಗ್ಯಾಸ್ ಸಿಲಿಂಡರ್ ಬೆಲೆ 400 ರೂ. ಇದ್ದು, 800 ರೂ. ಕ್ಕೂ ಮೀರಿದೆ.ಆದರೂ ಪೆಟ್ರೋಲ್ ಡೀಸೆಲ್ ಬೆಲೆಯನ್ನು ಕೇಂದ್ರ ಸರ್ಕಾರ ಹೆಚ್ಚಿಸಿರುವ ಬಗ್ಗೆ ಜನರು ಪ್ರಶ್ನೆ ಕೇಳಬೇಕಿದೆ. ಸರ್ಕಾರ ಆರ್ಥಿಕ ದಿವಾಳಿಯಾಗಿದೆ ಎಂಬ ಬಿಜೆಪಿಯವರ ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರ ಕಾಲದಲ್ಲಿ ಅನುದಾನವಿಲ್ಲದಿದ್ದರೂ, ಕಾಮಗಾರಿಗಳಿಗೆ ಮಂಜೂರಾತಿ ನೀಡಿ, ಟೆಂಡರ್ ಪ್ರಕ್ರಿಯೆ ಕೈಗೊಂಡಿದ್ದರು. ಈಗ ನಮಗೆ ಪಾಠ ಹೇಳುತ್ತಿದ್ದು, ಆರ್ಥಿಕ ದಿವಾಳಿಯಾಗಿದ್ದರೆ, ಅದಕ್ಕೆ ಬಿಜೆಪಿಯವರೇ ಕಾರಣ ಎಂದರು. ನಾವು ಹಿಂದಿನ ವರ್ಷಕ್ಕಿಂತ ಈ ಸಾಲಿನ ಬಜೆಟ್ ನ ಪ್ರಮಾಣ ಸುಮಾರು 38 ಸಾವಿರ ಕೋಟಿಯಷ್ಟು ಹೆಚ್ಚಿಸಲಾಗಿದೆ. ಇದು ನಮ್ಮ ಸರ್ಕಾರದ ಆರ್ಥಿಕ ದಿವಾಳಿತನವೇ ಎಂದು ಪ್ರಶ್ನಿಸಿದರು.

Share News

About BigTv News

Check Also

ಮಣಿಪಾಲ: ರಸ್ತೆಯಲ್ಲೇ ಗುಂಪು ಕಟ್ಟಿ ಮಾರಾಮಾರಿ; ವೈರಲ್ ವಿಡಿಯೊ ಆಧರಿಸಿ 11 ಯುವಕರ ವಿರುದ್ಧ ಪ್ರಕರಣ ದಾಖಲು

ಮಣಿಪಾಲದ ಈಶ್ವರನಗರದಲ್ಲಿ ರಾಷ್ಟ್ರೀಯ ಹೆದ್ದಾರಿ 169(A) ಪಕ್ಕದ ಸಾರ್ವಜನಿಕ ರಸ್ತೆಯಲ್ಲಿ ಯುವಕರ ಗುಂಪೊಂದು ಪರಸ್ಪರ ಹೊಡೆದಾಡಿಕೊಂಡ ಘಟನೆ ನಡೆದಿದೆ. ಈ …

Leave a Reply

Your email address will not be published. Required fields are marked *