Breaking News

ದೇಶದ ಸಾಲ ನಾಲ್ಕು ಪಟ್ಟು ಹೆಚ್ಚಲು ಮೋದಿಯವರೇ ಕಾರಣ!!!CM ಹೇಳಿಕೆ..

ನರೇಂದ್ರ ಮೋದಿಯವರು ಅಧಿಕಾರಕ್ಕೆ ಬರುವ ಮುಂಚೆ ದೇಶದ ಮೇಲೆ 5311000 ಕೋಟಿ ಸಾಲವಿತ್ತು. ಆದರೆ ಈಗ 200 ಲಕ್ಷ ಕೋಟಿಗೆ ಸಾಲ ಹೆಚ್ಚಿದೆ. ದೇಶದ ಸಾಲ ಮೊತ್ತ ನಾಲ್ಕು ಪಟ್ಟು ಹೆಚ್ಚಲು ನರೇಂದ್ರ ಮೋದಿಯವರೇ ಕಾರಣ ಎಂದರು. ಜನರ ಆರ್ಥಿಕ ಸಾಮಾಜಿಕ ಸ್ಥಿತಿಗತಿ ಅರಿಯಲು ಜಾತಿಗಣತಿ ಅಗತ್ಯ,
ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳುವ ಸಲುವಾಗಿ ಜಾತಿಗಣತಿಯನ್ನು ಮುನ್ನಲೆಗೆ ತಂದಿರುವುದಾಗಿ ಜಗದೀಶ್ ಶೆಟ್ಟರ್ ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಅವರು ಮುಖ್ಯಮಂತ್ರಿಯಾಗಿ, ವಿರೋಧಪಕ್ಷದ ನಾಯಕರಾಗಿಯೂ ಅಸಮರ್ಥರಾಗಿದ್ದರು. ಕಾಂಗ್ರೆಸ್ ಪಕ್ಷಕ್ಕೆ ವಲಸೆ ಬಂದಾಗ ಬಿಜೆಪಿಯವರ ವಿರೋಧವೇ ಹಲವು ಹೇಳಿಕೆಗಳನ್ನು ನೀಡಿದ್ದರು. ಜಾತಿಗಣತಿ ಜಾರಿಗೆ ತರಬೇಕೆಂಬುದು ಕಾಂಗ್ರೆಸ್ ನ ಭರವಸೆಯಾಗಿದೆ. ಒಂದು ಕುಟುಂಬದಲ್ಲಿ ಆರ್ಥಿಕವಾಗಿ, ಸಾಮಾಜಿಕವಾದ ಪರಿಸ್ಥಿತಿಯ ಬಗ್ಗೆ ಮಾಹಿತಿ ತಿಳಿಯುವುದು ಅವಶ್ಯಕ. ಸ್ವಾತಂತ್ರ್ಯ ನಂತರ ಜಾತಿಗಣತಿ ನಡೆಯದೇ, ಅನೇಕ ನ್ಯಾಯಾಲಯಗಳಲ್ಲಿ ಈ ಬಗ್ಗೆ ಮಾಹಿತಿ ಕೇಳಲಾಗಿತ್ತು. ಆದ್ದರಿಂದ ಜಾತಿಗಣತಿ ಮಾಡಬೇಕಾದ್ದು ಅಗತ್ಯ ಎಂದರು.

Share News

About BigTv News

Check Also

ವಾರ್ಷಿಕ ₹15 ಕೋಟಿ ವಹಿವಾಟು ನಡೆಸುತ್ತಿದ್ದ ನಕಲಿ ಔಷಧ ಮಾರಾಟದ ಕಿಂಗ್‌ಪಿನ್‌ ವೀರೇಶ್‌ಕುಮಾರ್‌

ನಕಲಿ ಔಷಧ ದಂಧೆಯ ಪ್ರಮುಖ ಆರೋಪಿ ವೀರೇಶ್‌ಕುಮಾರ್‌ ವಾರ್ಷಿಕ ₹15 ಕೋಟಿ ವಹಿವಾಟು ನಡೆಸುತ್ತಿದ್ದ ಎಂಬುದು ಎಸ್‌ಐಟಿ ತನಿಖೆಯಿಂದ ತಿಳಿದುಬಂದಿದೆ. …

Leave a Reply

Your email address will not be published. Required fields are marked *