Breaking News

ಬೀದಿದೀಪ ಆರಿಸಲು ಹೋದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಓರ್ವ ಸಾವು!!

ಸೋಮವಾರ ಬೆಳಗ್ಗೆ ಮನೆ ಸಮೀಪದ ಬೀದಿದೀಪ ಆರಿಸಲು ಹೋದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ. ಬೀದಿ ದೀಪಗಳಿಗೆ ಅಳವಡಿಸಿರುವ ವೈರ್‌ಗೆ ಸ್ವಿಚ್ ಹಾಕುವಂತೆ ಅನೇಕ ಬಾರಿ ಸಂಬಂಧಿಸಿದ ಬೆಸ್ಕಾಂ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ತಿಳಿಸಿದ್ದರೂ ಕ್ರಮ ಕೈಗೊಂಡಿರಲಿಲ್ಲ. ಸ್ವಿಚ್ ಅಳವಡಿಸುವುದಕ್ಕೆ ಬದಲಾಗಿ ವೈರನ್ನೇ ಒಂದಕ್ಕೊಂದು ಸ್ಪರ್ಶಿಸಿ ಇಟ್ಟಿರುವುದೇ ಅನಾಹುತಕ್ಕೆ ಕಾರಣ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.ಮೃತರು ಪತ್ನಿ, ಎರಡು ವರ್ಷದ ಹೆಣ್ಣು ಮಗು ಹಾಗೂ ಒಂದು ತಿಂಗಳ ಮಗುವನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಸೋಮವಾರ ಸಂಜೆ ಗ್ರಾಮದಲ್ಲಿ ನೆರವೇರಿತು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *