ದಾಮರಗಿಡ್ಡ ಗ್ರಾಮದಲ್ಲಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಇಬ್ಬರು ಸೋದರಸಂಬಂಧಿ ಮಕ್ಕಳು ಆಟವಾಡುತ್ತಿದ್ದಾಗ ಸಂಬಂಧಿಕರ ಮನೆಯ ಬಳಿ ನಿಲ್ಲಿಸಿದ್ದ ಕಾರನ್ನು ಹತ್ತಿ ಸಿಲುಕಿಕೊಂಡಿದ್ದಾರೆ.ಮಕ್ಕಳು ಕಾರಿನೊಳಗೆ ಸಿಲುಕಿಕೊಂಡಿರುವುದು ಅವರ ಪೋಷಕರಿಗೆ ಅಥವಾ ಅವರ ಇತರ ಕುಟುಂಬ ಸದಸ್ಯರಿಗೆ ತಿಳಿದಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಸುಮಾರು 30-45 ನಿಮಿಷಗಳ ನಂತರ, ಹುಡುಗಿಯರನ್ನು ಕಾರಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿರುವುದನ್ನು ಗಮನಿಸಲಾಗಿದ್ದು, ತತ್ ಕ್ಷಣ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿ ಮೃತ ಪಟ್ಟಿದ್ದಾರೆ ಎಂದು ಘೋಷಿಸಲಾಯಿತು ಎಂದು ಚೆವೆಲ್ಲಾ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

