ಎರಡು ತಿಂಗಳ ಹಿಂದೆಯಷ್ಟೇ ಮೇದರಹಳ್ಳಿಯ ವಿನಾಯಕ ಲೇಔಟ್‌ನಲ್ಲಿ ಬಾಲರಾಜ್ ಎನ್ನುವವರಿಗೆ ಸೇರಿದ ಮನೆಯಲ್ಲಿ ಕೃಷ್ಣಮೂರ್ತಿ ಕುಟುಂಬ ಬಾಡಿಗೆಗೆ ಇತ್ತು. ಅಕ್ಕ ನಯನಾ ಎಂಜಿನಿಯರಿಂಗ್ ಮುಗಿಸಿ ಕೆಲಸ ಹುಡುಕುತ್ತಿದ್ದು, ಆರೋಪಿ ತಮ್ಮನೂ ಎಂಜಿನಿಯರಿಂಗ್ ಓದುತ್ತಿದ್ದ.ಮನೆಯಲ್ಲಿ ಮಲಗಿದ್ದ ಅಕ್ಕ ಹಾಗೂ ತಾಯಿ, ತಂದೆಯರ ಮೇಲೆ ಮಗನೇ ಇದ್ದಕ್ಕಿದ್ದಂತೆ ಚಾಕು ಹಿಡಿದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.ಮನೆಯೊಳಗೆ ಕಿರುಚಾಟ ಕೇಳಿ ನೆರೆಹೊರೆಯವರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಸೋಲದೇವನಹಳ್ಳಿ ಪೊಲೀಸರು ಬಾಗಿಲು ಒಡೆದು ಮನೆಯವರನ್ನು ರಕ್ಷಿಸಿದ್ದಾರೆ. ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

