Breaking News

ಹುಬ್ಬಳ್ಳಿ :ಎನ್‌ಕೌಂಟರ್‌ಗೆ ಬಲಿಯಾದ ಹಂತಕನ ಫೋಟೋ ರಿಲೀಸ್..

ಹುಬ್ಬಳ್ಳಿಯ ಕಿಮ್ಸ್ ಶವಗಾರದಲ್ಲಿ ಇಲ್ಲಿಯವರೆಗೂ ಅನಾಥವಾಗಿ ಬಿದ್ದಿರುವ ಹಂತಕನ ಶವ ಗುರುತಿಸಲು ಅವರ ಸಂಬಂಧಿಕರಾಗಲಿ, ಪರಿಚಯಸ್ಥರಾಗಲಿ ಯಾರೂ ಬಾರದ ಕಾರಣ ಪೋಟೋ ರಿಲೀಸ್ ಮಾಡಿದ್ದಾರೆ. ಕಾಮುಕ ರಿತೇಶಕುಮಾರನ (35) ಭಾವಚಿತ್ರ ಬಿಡುಗಡೆ ಮಾಡಿದ್ದು.ಕುಟುಂಬಸ್ಥರ ಪತ್ತೆಗೆ ಭಾವಚಿತ್ರ ಸಹಿತ ಅಶೋಕ ನಗರ ಪೋಲೀಸರುಪ್ರಕಟಣೆ ಹೊರಡಿಸಿದ್ದಾರೆ. ಈತ ಗೋದಿ ಮೈಬಣ್ಣ, ತೆಳ್ಳನೆಯ ಮೈಕಟ್ಟು, ಕೋಲು ಮುಖ, 5.3 ಎತ್ತರ, ಅಗಲ ಹಣೆ ಹೊಂದಿದ್ದಾನೆ.ಅಲ್ಲದೆ, ಈತನ ಬಲಗೈಯಲ್ಲಿ ಹಿಂದಿ ಅಕ್ಷರದಲ್ಲಿ ಓಂ ನಮಃ ಶಿವಾಯ ಜಯ ಸಂಜಯ ಎಂಬ ಟ್ಯಾಟೋ ಗುರುತು ಸಹ ಇದೆ. ಈತನ ಗುರುತು ಪರಿಚಯ ಇದ್ದವರು ಕೂಡಲೇ 0836-2233490 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *