ಪ್ರಾಥಮಿಕ ಶಾಲೆಯ ಶಿಕ್ಷಕರಾಗಿರುವ ಪುಷ್ಪೇಂದ್ರ ಗಂಗ್ವಾರ್ ಕಳೆದ ಐದು ದಿನಗಳಿಂದ ಕಾಣೆಯಾಗಿದ್ದಾರೆ. ಬರೇಲಿಯ ಇಜ್ಜತ್‌ನಗರದ ತ್ರಿಲೋಕ ವಿಹಾರದ ನಿವಾಸಿಯಾಗಿರುವ ಪುಷ್ಪೇಂದ್ರ ಗಂಗ್ವಾರ್ ಕುಟುಂಬಸ್ಥರ ಸಂಪರ್ಕಕ್ಕೂ ಸಿಗುತ್ತಿಲ್ಲ. ಈ ಹಿನ್ನೆಲೆ ಕುಟುಂಬಸ್ಥರು, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹುಡುಕಾಟ ಆರಂಭಿಸಿದ್ದು, ಎಲ್ಲಾ ಆಯಾಮದಲ್ಲಿಯೂ ತನಿಖೆ ನಡೆಸುತ್ತಿದ್ದಾರೆ. ಈ ಎಲ್ಲಾ ಬೆಳವಣಿಗೆ ನಡುವೆ ಪುಷ್ಪೇಂದ್ರ ಪತ್ನಿ, ಜಯಶ್ರೀ ಗಂಗ್ವಾರ್ ವಿಡಿಯೋ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಪುಷ್ಪೇಂದ್ರ ಗಂಗ್ವಾರ್ ನಾಪತ್ತೆಯಾಗಿರುವ ಬಗ್ಗೆ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಶಿಕ್ಷಕನ ಪತ್ತೆಗೆ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಸಾಧ್ಯವಿರುವ ಎಲ್ಲಾ ಸ್ಥಳಗಳನ್ನು ಹುಡುಕಲಾಗುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

