Breaking News

ಬೆಂಗಳೂರು :ವಿಳಾಸ ಕೇಳುವ ನೆಪದಲ್ಲಿ ಸರಗಳ್ಳತನ!!

ಸರ ಕಳವು ಮಾಡುತ್ತಿದ್ದ ಮಹಾರಾಷ್ಟ್ರದ ಕುಖ್ಯಾತ ‘ನಾಗಪುರ ಗ್ಯಾಂಗ್‌’ನ ನಾಲ್ವರು ಸದಸ್ಯರನ್ನು ಜೆ.ಸಿ.ನಗರ ಠಾಣೆ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ ₹6 ಲಕ್ಷ ಮೌಲ್ಯದ 87 ಗ್ರಾಂ ಚಿನ್ನಾಭರಣ, ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ ಹಾಗೂ ಕಾರನ್ನು ಜಪ್ತಿ ಮಾಡಲಾಗಿದೆ.ಮಹಾರಾಷ್ಟ್ರದ ನಾಗಪುರ ಮೂಲದ ದರೋಡೆಕೋರರ ಗ್ಯಾಂಗ್‌ ಇದಾಗಿದ್ದು, ಅಪರಾಧ ಜಗತ್ತಿನಲ್ಲಿ ನಾಗಪುರ ಗ್ಯಾಂಗ್‌ ಎಂದೇ ಕುಖ್ಯಾತಿ ಪಡೆದಿದೆ. ಈ ಗ್ಯಾಂಗ್‌ನ ಸದಸ್ಯರು ಮಹಾರಾಷ್ಟ್ರದಿಂದ ಸ್ವಂತ ವಾಹನಗಳಲ್ಲಿ ನೆರೆಯ ರಾಜ್ಯಗಳಿಗೆ ತೆರಳಿ ಸರಗಳವು, ಮನೆಗಳವು, ದರೋಡೆ ಸೇರಿದಂತೆ ವಿವಿಧ ಅಪರಾಧ ಕೃತ್ಯ ಎಸೆಗುತ್ತಾರೆ. ಬಳಿಕ ಕದ್ದ ಮಾಲುಗಳೊಂದಿಗೆ ನಾಗಪುರಕ್ಕೆ ತೆರಳಿ ವಿಲೇವಾರಿ ಮಾಡುತ್ತಾರೆ. ಇವರು ಒಮ್ಮೆ ಬಂದರೆ, ಐದಾರು ಅಪರಾಧ ಕೃತ್ಯಗಳನ್ನು ಮಾಡಿಯೇ ಪರಾರಿಯಾಗುತ್ತಾರೆ. ಇನ್ನು ಆರು ತಿಂಗಳು ಅಥವಾ ವರ್ಷ ಆ ಕಡೆಗೆ ಬರುವುದಿಲ್ಲ. ಈ ಗ್ಯಾಂಗ್‌ ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿಯೂ ಅಪರಾಧ ಕೃತ್ಯಗಳಲ್ಲಿ ತೊಡಗಿದೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *