ವಾಟ್ಸಾಪ್‌ಗೆ ಇತ್ತೀಚೆಗೆ ಅಪರಿಚಿತ ಸಂಖ್ಯೆಯಿಂದ MIRAE ASSET Sharekhan Securities Ltd ಹೆಸರಿನ ಕಂಪನಿಯಲ್ಲಿ ಹೂಡಿಕೆ ಮಾಡುವಂತೆ ಸಂದೇಶದ ಲಿಂಕ್ ಬಂದಿದೆ. ಮಂಜುನಾಥ ಅವರು ಈ ಲಿಂಕ್ ತೆರೆದಾಗ ನೋಂದಣಿ ಮಾಡಿಕೊಳ್ಳುವಂತೆ ಮತ್ತೊಂದು ಲಿಂಕ್ ಕಳುಹಿಸಲಾಗಿದೆ. ಆ ಲಿಂಕ್ ಕ್ಲಿಕ್ ಮಾಡಿದಾಗ MIRAE ASSET Sharekhan ಎಂಬ ಅಪ್ಲಿಕೇಶನ್ ತೆರೆದುಕೊಂಡಿದೆ. ಈ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿಕೊಳ್ಳುವಂತೆ ಅಪರಿಚಿತರು ಸೂಚಿಸಿದ್ದಾರೆ.ಇದನ್ನು ನಂಬಿದ ಮಂಜುನಾಥ, ಅಪರಿಚಿತರ ಸೂಚನೆ ಮೇರೆಗೆ ವಿವಿಧ ಬ್ಯಾಂಕ್ ಖಾತೆಗಳಿಗೆ ವಿವಿಧ ಹಂತಗಳಲ್ಲಿ ಒಟ್ಟು ₹65.51 ಲಕ್ಷ ವರ್ಗಾಯಿಸಿದ್ದಾರೆ. ಬಳಿಕ ಆ ಆಯಪ್‌ನಲ್ಲಿ ಹೂಡಿಕೆ ಮತ್ತು ಲಾಭ ಸೇರ ಒಟ್ಟು 1.08 ಕೋಟಿ ರು. ತೋರಿಸಿದೆ. ಈ ವೇಳೆ ಮಂಜುನಾಥ ಬಂಡವಾಳ ಮತ್ತು ಲಾಭ ವಾಪಸ್ ನೀಡುವಂತೆ ಕೇಳಿದ್ದಾರೆ. ಆದರೆ, ಅಪರಿಚಿತರು ಸಂಪರ್ಕ ಕಡಿದುಕೊಂಡು ವಂಚಿಸಿದ್ದಾರೆ
bigtvnews | Hubli Dharwad News | Kannada News | Karnataka News Hubli News | News In Hubli | Local news

