Breaking News

ಯುವತಿಗೆ ಕಿರುಕುಳ ನೀಡಿದ ಕಾಮುಕನಿಗೆ ಎಸ್ಕೇಪ್‌ ಆಗಲು ಸಹಕರಿಸಿದ್ದ ಪ್ರೇಯಸಿ ವಿಚಾರಣೆ!!

ಯುವತಿಗೆ ಕಿರುಕುಳ ನೀಡಿ ಪರಾರಿಯಾಗಿದ್ದ ಸಂತೋಷ್‌ ಬಳಿಕ 4 ದಿನ ಎಂದಿನಂತೆ ಕಾರು ಶೋ ರೂಮ್‌ನಲ್ಲಿ ಕೆಲಸ ಮಾಡಿದ್ದ. ಆರೋಪಿ ದುಷ್ಕೃತ್ಯದ ಸಿಸಿಟಿವಿ ದೃಶ್ಯಾವಳಿ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಇದನ್ನು ಗಮನಿಸಿದ್ದ ಪ್ರೇಯಸಿ, ಪ್ರಿಯಕರ ಸಂತೋಷ್‌ಗೆ ಮಾಹಿತಿ ನೀಡಿ ಪೊಲೀಸರು ನಿನ್ನನ್ನು ಬಂಧಿಸಬಹುದು. ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದಳು. ಹೀಗಾಗಿ ಆರೋಪಿ ಸಂತೋಷ್‌ ಕೆಲಸಕ್ಕೆ ಗೈರಾಗಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.ಸಂತೋಷ್‌ ಹೊಸ ಸಿಮ್‌ ಬಳಸಿ ಬೆಂಗಳೂರಿನ ತಿಲಕನಗರದ ಗುಲ್ಬರ್ಗಾ ಕಾಲೋನಿಯಲ್ಲಿರುವ ತಾಯಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದ. ಮತ್ತೊಂದೆಡೆ ಪೊಲೀಸರ ತಂಡವೊಂದು ಜಾಡು ಹಿಡಿದು ಕೇರಳಕ್ಕೆ ತೆರಳಿ ಹೋಟೆಲ್‌ನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಈ ವೇಳೆ ಆರೋಪಿಯ ಜತೆಗಿದ್ದ ಪ್ರೇಯಸಿಯನ್ನು ವಶಕ್ಕೆ ಪಡೆದು ಇಬ್ಬರನ್ನೂ ನಗರಕ್ಕೆ ಕರೆತಂದಿದ್ದಾರೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *