ಸತ್ಪೀರ್ ದರ್ಗಾ ಟ್ರಸ್ಟಿಗಳು ದರ್ಗಾವನ್ನು ಕೆಡವಿ ಹಾಕುವ ಪ್ರಕ್ರಿಯೆಯನ್ನು ಪ್ರಾರಂಭಿಸಿದರು. ದರ್ಗಾ ಕೆಡವುದನ್ನು ವಿರೋಧಿಸಲು ಗುಂಪೊಂದು ಜಮಾಯಿಸಿ ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ಹೋದ ಪೊಲೀಸರು ಮತ್ತು ಮುಸ್ಲಿಂ ನಾಯಕರ ಮೇಲೆ ಕಲ್ಲು ತೂರಾಟ ನಡೆಸಿತು ಎಂದು ನಾಶಿಕ್ ಪೊಲೀಸ್ ಆಯುಕ್ತ ಸಂದೀಪ್ ಕಾರ್ಣಿಕ್ ತಿಳಿಸಿದ್ದಾರೆ. ದಾಳಿಯಲ್ಲಿ ಮೂರು ಪೊಲೀಸ್ ವಾಹನಗಳು ಹಾನಿಗೊಳಗಾದವು ಮತ್ತು 21 ಪೊಲೀಸ್ ಸಿಬ್ಬಂದಿ ಗಾಯಗೊಂಡರು. ಇಂದು ಬೆಳಗ್ಗೆ ದರ್ಗಾವನ್ನು ಕೆಡವಲಾಯಿತು. ಎಫ್‌ಐಆರ್ ದಾಖಲಿಸುವ ಮತ್ತು ಹಿಂಸಾಚಾರದಲ್ಲಿ ಭಾಗಿಯಾಗಿರುವವರನ್ನು ಬಂಧಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದರು.ಉದ್ರಿಕ್ತ ಗುಂಪು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮತ್ತು ಅಶ್ರುವಾಯು ಶೆಲ್‌ಗಳನ್ನು ಪ್ರಯೋಗಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು, ಹಿಂಸಾಚಾರಕ್ಕೆ ಸಂಬಂಧಿಸಿದಂತೆ 15 ಜನರನ್ನು ಬಂಧಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

