ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಈ ದುರಂತ ನಡೆದಿದೆ. 8 ತಿಂಗಳ ಗರ್ಭಿಣಿ ಅನುಷಾ ಹಾಗೂ ಪತಿ ಜ್ಞಾನೇಶ್ವರ್ ಮಧ್ಯೆ ನಿನ್ನೆ ಮುಂಜಾನೆ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ತಾಳ್ಮೆ ಕಳೆದುಕೊಂಡ ಗಂಡ ಹೆಂಡ್ತಿ ಗರ್ಭಿಣಿ ಎಂಬುದನ್ನೂ ಮರೆತು ಕತ್ತು ಹಿಸುಕಿದ್ದಾನೆ. ಇದರಿಂದ ಕೂಡಲೇ ಆಕೆ ಪ್ರಜ್ಞೆ ಕಳೆದುಕೊಂಡು ಕೆಳಗೆ ಬಿದ್ದಿದ್ದಾಳೆ. ಕೂಡಲೇ ಭಯಬೀತನಾದ ಆತ ಹೆಂಡತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾನೆ. ಆದರೆ ಅಲ್ಲಿ ಆಕೆ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ. ನಂತರ ಆರೋಪಿ ಗಂಡ ಸೀದಾ ಹೋಗಿ ಪೊಲೀಸರಿಗೆ ಶರಣಾಗಿದ್ದಾನೆ. ಒಂದು ಕ್ಷಣದ ಸಿಟ್ಟಿಗೆ ಆತ ದೊಡ್ಡ ಬೆಲೆಯನ್ನೇ ತೆರಬೇಕಾಗಿ ಬಂದಿದೆ
