Breaking News

ಪ್ರೀತಿಸಿದ ಶಿಕ್ಷಕಿ ಕೈಕೊಟ್ಟಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕ!!

ಪ್ರೀತಿಸಿದ ಶಿಕ್ಷಕಿ ಕೈಕೊಟ್ಟ ಕಾರಣ ಶಿಕ್ಷಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮಾಕಳಿ ಗ್ರಾಮದಲ್ಲಿ ನಡೆದಿದೆ. ಅಕ್ರಮ ಪ್ರೇಮ ಸಂಬಂಧದ ಸಂಕಷ್ಟದ ಮಧ್ಯೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದೊಡ್ಡ ಚರ್ಚೆಗೆ ಕಾರಣವಾಗಿದೆ.ಆನಂದ ಆತ್ಮಹತ್ಯೆಗೂ ಮೊದಲು ಡೆತ್ ನೋಟ್ ಬರೆದು, ವಾಟ್ಸಪ್ ಸ್ಟೇಟಸ್‌ನಲ್ಲೂ ಹೇಮಲತಾಳ ಕಿರುಕುಳದ ಬಗ್ಗೆ ಮಾಹಿತಿ ಹಾಕಿದ್ದಾನೆ. ಮಾಕಳಿಯ ಟ್ಯೂಷನ್ ಸೆಂಟರ್‌ನಲ್ಲಿ ಪ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಮೃತದೇಹ ಕೊಡಲಾಗಿದೆ. ಘಟನೆ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 108B ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿತ ಶಿಕ್ಷಕಿ ಹೇಮಲತಾರನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಲಾಗುತ್ತಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *