ಪತ್ನಿ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ. ಲಾರಿ ಮಾಲೀಕ 45 ವರ್ಷದ ಸ್ವಾಮಿ ಮೃತ ಪತಿ. ಸ್ಥಳಕ್ಕೆ ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮೃತನ ಸಂಬಂಧಿ ನಾಗರಾಜ್ ಎಂಬುವವರು ಮಾಧ್ಯಮದವರೊಂದಿಗೆ ಮಾತನಾಡಿದ್ದು, ಮೃತ ಸ್ವಾಮಿ ಒಳ್ಳೆಯ ಮನುಷ್ಯ. ಮದುವೆ, ಮನೆ, ಮಕ್ಕಳು ಅಂತ ಇದ್ದವರು. ಆತನ ಪತ್ನಿ ಕಳೆದ ಎರಡು ವರ್ಷಗಳ ಹಿಂದೆ ಗುತ್ತಿಗೆ ಮೇಲೆ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕೆಲಸಕ್ಕೆ ಸೇರಿದ್ದರು.ಸ್ವಾಮಿ ನಿನ್ನೆ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೊತೆಗೆ ಮೂರು ಪುಟಗಳ ಡೆತ್ ನೋಟ್ ಬರೆದು ಇಟ್ಟಿದ್ದಾರಂತೆ. ಅದು ನಮಗೆ ಸಿಕ್ಕಿಲ್ಲ. ಪೊಲೀಸರು ಮಹಜರು ಮಾಡಿದಾಗ ನೋಡಬೇಕು ಎಂದು ಹೇಳಿದ್ದಾರೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

