Breaking News
Oplus_131072

ಪಶ್ಚಿಮ ಬಂಗಾಳ ಮೂಲದ ಯುವತಿ ಮೇಲೆ ಮೂವರಿಂದ ಗ್ಯಾಂಗ್ ರೇಪ್ ಶಂಕೆ!!

ಕೇರಳದ ಪ್ಲೈವುಡ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಈ ಯುವತಿ ಬುಧವಾರ ರಾತ್ರಿ ಪರಿಚಿತ ಪುರುಷನೊಂದಿಗೆ ರೈಲಿನಲ್ಲಿ ಮಂಗಳೂರಿಗೆ ಬಂದಿರುವುದಾಗಿ ಹೇಳಿಕೊಂಡಿದ್ದಾರೆ.ಯುವತಿ ಸ್ನೇಹಿತನ ಜೊತೆಗೆ ಮಂಗಳೂರಿಗೆ ಬಂದಿದ್ದ ವೇಳೆ ಇಬ್ಬರ ನಡುವೆ ಗಲಾಟೆಯಾಗಿದೆ. ಈ ವೇಳೆ ಆಕೆ ಒಬ್ಬಳೇ ಮಧ್ಯರಾತ್ರಿ ಹೊರಗೆ ಬಂದಿದ್ದಾಳೆ. ಈ ವೇಳೆ ಸಿಕ್ಕ ರಿಕ್ಷಾ ಚಾಲಕನ ಬಳಿ ಸಹಾಯ ಕೇಳಿದ್ದಾಳೆ. ಸಹಾಯ ಮಾಡುವ ನೆಪದಲ್ಲಿ ತನ್ನ ಆಟೋದಲ್ಲಿ ಕರೆದುಕೊಂಡು ಹೋದ ಚಾಲಕ ಆಕೆಗೆ ಅಮಲು ಪದಾರ್ಥ ನೀಡಿ ಸ್ನೇಹಿತರ ಜೊತೆಗೆ ಸೇರಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಆಟೋ ಚಾಲಕ ತನಗೆ ಮಾದಕ ವಸ್ತು ನೀಡಿದ ನಂತರ ತಾನು ಪ್ರಜ್ಞೆ ತಪ್ಪಿದೆ ಎಂದು ಯುವತಿ ಆರೋಪಿಸಿದ್ದಾರೆ. ತನಗೆ ಭಾಗಶಃ ಪ್ರಜ್ಞೆ ಬಂದಾಗ, ಆಟೋ ಚಾಲಕ ಸೇರಿದಂತೆ ಮೂವರು ವ್ಯಕ್ತಿಗಳೊಂದಿಗೆ ಕಾರಿನಲ್ಲಿದ್ದೆ ಎಂದು ಯುವತಿ ಹೇಳಿದ್ದಾರೆ.ಸ್ಥಳಕ್ಕಾಗಮಿಸಿದ ಪೊಲೀಸರು ಯುವತಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *