Breaking News

ನಕಲಿ ಅಭ್ಯರ್ಥಿ ಪತ್ತೆ; ಅಕ್ರಮ ಬಯಲಾಗ್ತಿದ್ದಂತೆ ಫಾತೀಮಾ ಪರಾರಿ!

ಸಿಇಟಿ ಪರೀಕ್ಷಾ ಕೇಂದ್ರ ಪ್ರವೇಶಿಸಲು ಯತ್ನಿಸಿದ ಮಹಿಳಾ ಅಭ್ಯರ್ಥಿಯೊಬ್ಬಳು ಕ್ಯೂಆರ್ ಕೋಡ್ ಆಧಾರಿತ ಮುಖ ಚಹರೆ ಪತ್ತೆ ಆಯಪ್ ಮೂಲಕ ತಪಾಸಣೆ ವೇಳೆ ನಕಲಿ ಎಂಬುದು ಪತ್ತೆಯಾಗಿದೆ. ಇದನ್ನು ಸಿಬ್ಬಂದಿ ಉನ್ನತ ಅಧಿಕಾರಿಗಳ ಗಮನಕ್ಕೆ ತರುವಷ್ಟರಲ್ಲಿ ಆಕೆ ಪರಾರಿಯಾಗಿರುವ ಘಟನೆ ನಗರದಲ್ಲಿ ಗುರುವಾರ ನಡೆದಿದೆ.ಮಲ್ಲೇಶ್ವರದ ಸರ್ಕಾರಿ ಪಿಯು ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಮತ್ತು ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ಗುರುವಾರ ಭೇಟಿ ನೀಡಿ ಖುದ್ದು ಕ್ಯೂಆರ್ ಕೋಡ್ ಆಧಾರಿತ ಮುಖ ಚಹರೆ ಪತ್ತೆ ಆಯಪ್ ಮೂಲಕ ಅಭ್ಯರ್ಥಿಗಳ ತಪಾಸಣೆ ಮಾಡಿದರು. ಇಬ್ಬರೂ ಅಧಿಕಾರಿಗಳು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ವಿದ್ಯಾರ್ಥಿಗಳ ಭಾವಚಿತ್ರ ತೆಗೆದು ನೈಜತೆ ಪರಿಶೀಲಿಸಿದರು.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *