ರಾಮಣ್ಣ ಗಾರ್ಡನ್ ನಿವಾಸಿ ಪ್ರಶಾಂತ್ ಅಲಿಯಾಸ್ ಸಿಂಬು ಆರೋಪಿತನಾಗಿದ್ದು, ಇತ್ತೀಚಿಗೆ ಎಸ್.ಜಿ.ಪಾರ್ಕ್ ಬಳಿ ನಡು ರಸ್ತೆಯಲ್ಲಿ ಕುರ್ಚಿ ಹಾಕಿಕೊಂಡು ಚಹಾ ಕುಡಿಯುತ್ತ ಆತ ರೀಲ್ಸ್ ಮಾಡಿದ್ದ.ಈ ಹುಚ್ಚಾಟದಿಂದ ಸಾರ್ವಜನಿಕ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿತ್ತು. ಈ ವಿಡಿಯೋವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ರಸ್ತೆಯಲ್ಲಿ ವಾಹನಗಳಿಗೆ ಅಡ್ಡಪಡಿಸಿದ ಆರೋಪದ ಮೇರೆಗೆ ಬಂಧಿಸಿ ಬಳಿಕ ಠಾಣಾ ಜಾಮೀನು ಮೇರೆಗೆ ಬಿಡುಗಡೆಗೊಳಿಸಿದ್ದಾರೆ. ಈ ರೀತಿ ವರ್ತನೆ ತೋರಿದರೆ ಕಠಿಣ ಕ್ರಮ ಜರುಗಿಸಬೇಕಾಗುತ್ತದೆ ಎಂದು ಚಾಲಕನಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

