ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಮಿಡ್ ನೈಟ್ ನಲ್ಲಿ ದುಷ್ಕರ್ಮಿಗಳು ಫೈರಿಂಗ್ ನಡೆಸಿರುವ ಘಟನೆ ಬಿಡದಿಯ ಮುತ್ತಪ್ಪ ರೈ ನಿವಾಸದ ಮುಂದೆಯೇ ಜರುಗಿದೆ.ರಿಕ್ಕಿ ರೈ ತಮ್ಮ ಫಾರ್ಚೂನರ್ ಕಾರಿನಲ್ಲಿ ಡ್ರೈವರ್ ಮತ್ತು ಗನ್‌ಮ್ಯಾನ್ ಜೊತೆಗೆ ಬಿಡದಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದಾಳಿ ನಡೆದಿದೆ. ಮನೆಯ ಕಾಂಪೌಂಡ್ ಬಳಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ರಿಕ್ಕಿ ರೈ ಅವರಿಗೆ ಗಾಯಗಳಾಗಿವೆ. ತಕ್ಷಣವೇ ಅವರನ್ನು ಬಿಡದಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪ್ರಾಥಮಿಕ ಚಿಕಿತ್ಸೆಯ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಘಟನೆಯ ಸ್ಥಳಕ್ಕೆ ರಾಮನಗರ ಎಸ್‌ಪಿ ಶ್ರೀನಿವಾಸ್ ಗೌಡ ಮತ್ತು ಡಿವೈಎಸ್‌ಪಿ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ದಾಳಿಯ ಹಿಂದಿನ ಕಾರಣ, ದುಷ್ಕರ್ಮಿಗಳ ಗುರುತು ಮತ್ತು ಈ ಘಟನೆಯ ಹಿನ್ನೆಲೆಯನ್ನು ಪತ್ತೆಹಚ್ಚಲು ತೀವ್ರ ಪ್ರಯತ್ನ ನಡೆಯುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

