Breaking News

ಹಸುಗೂಸು ಸಾವು, ಸರ್ಕಾರಿ ವೈದ್ಯರ ಮೇಲೆ ಓವರ್‌ ಡೋಸ್‌ ಆರೋಪ!!

ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷಕ್ಕೆ ಮೂರು ತಿಂಗಳ ಪುಟಾಣಿ ಸಾವನ್ನಪ್ಪಿರುವ ಘಟನೆ ಅಥಣಿಯ ಕಾಗವಾಡ ತಾಲೂಕಿನ ಮೊಳೆ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಮಗುವಿಗೆ ಶುಕ್ರವಾಋ ಮೋಳೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್‌ ಪೋಲಿಯೋ, ಪೆಂಟಾ-1, ಐಪಿವ್ಹಿ-1, ಪಿವ್ಹಿಸಿ-1, ರೋಟಾ-1, ವೈರಸ್ ಡ್ರಾಪ್ ನೀಡಲಾಗಿತ್ತು.ಓವರ್ ಡೋಸ್ ನೀಡಿದ ವೈದ್ಯರ ನಿರ್ಲಕ್ಷವೇ ಇದಕ್ಕೆ ಕಾರಣ ಎಂದು ಮಗುವಿನ ಪೋಷಕರು ಆರೋಪ ಮಾಡಿದ್ದಾರೆ.
ಮಗು ಸಾವನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಥಣಿ ತಾಲೂಕು ಆರೋಗ್ಯ ಅಧಿಕಾರಿ ಡಾ.ಬಸಗೌಡ ಕಾಗೆ ಪ್ರತಿಕ್ರಿಯೆ ನೀಡಿದ್ದು. ಒಂದುವರೆ ತಿಂಗಳ ಮಗುವಿಗೆ ಹೃದಯ ತೊಂದರೆ ಇತ್ತು. ಲಸಿಕೆ ಪಡೆದ ಬೇರೆ ಮಕ್ಕಳಲ್ಲಿ ಯಾವುದೇ ತೊಂದರೆ ಕಂಡುಬಂದಿಲ್ಲ. ಸರ್ಕಾರಿ ಆಸ್ಪತ್ರೆಗೆ ಬರುವ ಮೊದಲೇ ಮಗು ಸಾವನಪ್ಪಿದ್ದು ಈಗಾಗಲೇ ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಗುತ್ತಿದೆ ಎಂದಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *