ಚಿಕ್ಕಬಳ್ಳಾಪುರ ತಾಲೂಕಿ ಲಿಂಗಶೆಟ್ಟಪುರ ಗೇಟ್ ಬಳಿಯ ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಾಗೇಪಲ್ಲಿ ಕಡೆಯಿಂದ ಬೆಂಗಳೂರು ಕಡೆಗೆ ಬೈಕ್ ಬರುತ್ತಿತ್ತು. ಬೈಕ್ ಪಕ್ಕದಲ್ಲಿ ಕಂಟೇನರ್ ಸಹ ಬರುತ್ತಿತ್ತು. ಆದರೆ, ಲಿಂಗಶೆಟ್ಟಪುರ ಗೇಟ್ ಬಳಿ ಈಶಾ ಪೌಂಡೇಷನ್ ಕಡೆಯಿಂದ ಬಂದ ಕಾರೊಂದು ರಭಸವಾಗಿ ಹೆದ್ದಾರಿಗೆ ಬಂದಿದೆ. ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಕಂಟೇನರ್ ಚಾಲಕ ಸಡನ್ ಆಗಿ ಬ್ರೇಕ್ ತುಳಿದು, ಕಂಟೇನರ್ ಅನ್ನು ಎಡಕ್ಕೆ ಎಳೆದಿದ್ದಾರೆ. ಕಂಟೇನರ್ ಪಕ್ಕದಲ್ಲೇ ಚಲಿಸುತ್ತಿದ್ದ ಬೈಕ್ ಸವಾರರ ಮೇಲೆ ಬಿದ್ದಿದೆ.
ಬೈಕ್ ಮೇಲೆ ಕಂಟೇನರ್ ಬಿದ್ದ ರಭಸಕ್ಕೆ ವೆಂಕಟೇಶ, ಅವರ ಪತ್ನಿ ರೂಪಾ ಮತ್ತು ಮಗಳು ದೀಕ್ಷಿತಾ ಕಂಟೇನರ್ ಕೆಳಗೆ ಸಿಲುಕಿದ್ದಾರೆ. ವೆಂಕಟೇಶ್ ಹಾಗೂ ದೀಕ್ಷಿತಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವೆಂಕಟೇಶ್ ಪತ್ನಿ ರೂಪಾ ಕಾಲುಗಳನ್ನು ಕಳೆದುಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

