Breaking News

ವಾಯು ವಿಹಾರಕ್ಕೆ ಹೋಗಿದ್ದ ನಗರಸಭೆ ಮಾಜಿ ಸದಸ್ಯನ ಬರ್ಬರ ಹತ್ಯೆ!!

ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದ ವೇಳೆ ಚಾಕು ಇರಿಯಲಾಗಿದ್ದು, ತಕ್ಷಣ ಸತೀಶ್​ರನ್ನ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ವೈಯಕ್ತಿಕ ದ್ವೇಷಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಕಾರವಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.ವೈಯಕ್ತಿಕ ಕಾರಣಕ್ಕೆ ಕೊಲೆ ಮಾಡಲಾಗಿದೆ ಎಂದ ಎಸ್.ಪಿ ಎಂ ನಾರಾಯಣ್
, ಕೊಲೆಯಾದ ವ್ಯಕ್ತಿ ಒಬ್ಬ ರೌಡಿ ಶೀಟರ್ ಆಗಿದ್ದ. ಮಾಜಿ ನಗರಸಭಾ ಸದಸ್ಯ ಕೂಡ ಹೌದು. ಈತನ ಮೇಲೆ 9ಕ್ಕೂ ಹೆಚ್ಚು ಪ್ರಕರಣಗಳಿವೆ. ಸತೀಶ್ ಕೊಳಂಕರ್ ಕಾರವಾರ ತಾಲೂಕಿನ ಚಿತ್ತಾಕುಲ ನಿವಾಸಿ. ಬೆಳಗಿನ ಜಾವ ವಾಯು ವಿಹಾರಕ್ಕೆ ಬಂದಾಗ ಚಾಕುವಿನಿಂದ ಇರಿಯಲಾಗಿತ್ತು. ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಸಾವು ಆಗಿದೆ ಎಂದಿದ್ದಾರೆ.

Share News

About BigTv News

Check Also

ಹುಬ್ಬಳ್ಳಿ–ಧಾರವಾಡದಲ್ಲಿ ಟ್ರಾಫಿಕ್ ಅರಾಜಕತೆ! ಅಪ್ರಾಪ್ತರ ಕೈಗೆ ಬೈಕ್, ರಸ್ತೆಯಲ್ಲಿ ಜೀವದ ಜೊತೆ ಚೆಲ್ಲಾಟ!

👆News Audio ಹೆಲ್ಮೆಟ್ ಇಲ್ಲ, ನಂಬರ್ ಪ್ಲೇಟ್ ಇಲ್ಲ… ಟ್ರಾಫಿಕ್ ಪೊಲೀಸರ ಕಣ್ಣೆದುರೇ ನಿಯಮಗಳ ಉಲ್ಲಂಘನೆ! ಸಾರ್ವಜನಿಕರ ಜೀವಕ್ಕೆ ಹೊಣೆ …

Leave a Reply

Your email address will not be published. Required fields are marked *