ಡ್ರೈವರ್ ನಿದ್ರೆಯ ಮಂಪರಿನಲ್ಲಿದ್ದ ಕಾರಣ, ತನ್ನ ನಿಯಂತ್ರಣ ತಪ್ಪಿ, ನಿಂತಿದ್ದ ಇಂಡಿಗೋ ಏರ್‌ಲೈನ್ಸ್‌ನ A320 ವಿಮಾನದ ಕೆಳಭಾಗಕ್ಕೆ ಗುದ್ದಿದೆ. ಡಿಕ್ಕಿ ಹೊಡೆದ ತಕ್ಷಣ ಚಾಲಕ ಎಚ್ಚೆತ್ತುಕೊಂಡಿದ್ದು, ತಕ್ಷಣವೇ ವಾಹನವನ್ನು ನಿಲ್ಲಿಸಿದ್ದಾನೆ.ಟೆಂಪೋ ಟ್ರಾವೆಲರ್‌ಗಳನ್ನು ಸಾಮಾನ್ಯವಾಗಿ ಏರ್‌ಪೋರ್ಟ್ ಸಿಬ್ಬಂದಿಯನ್ನು ಅವರ ಕಚೇರಿ ಮತ್ತು ವಿಮಾನಗಳ ಬಳಿ ಇರುವ ಸೇವಾ ಪ್ರದೇಶಗಳಿಗೆ ಡ್ರಾಪ್ ಹಾಗೂ ಪಿಕ್‌ಅಪ್ ಮಾಡಲು ಬಳಸಲಾಗುತ್ತದೆ. ಘಟನೆಯಲ್ಲಿ ಯಾವುದೇ ಸಿಬ್ಬಂದಿ ಅಥವಾ ಪ್ರಯಾಣಿಕರು ಇಲ್ಲದ ಕಾರಣ ಯಾವುದೇ ಹಾನಿಯಾಗಿಲ್ಲ. ವಿಮಾನಕ್ಕೆ ಸ್ವಲ್ಪ ಪ್ರಮಾಣದ ತಾಂತ್ರಿಕ ಹಾನಿ ಸಂಭವಿಸಿರುವ ವರದಿಯಾಗಿದೆ. ಈ ಕುರಿತು ತಕ್ಷಣವೇ ವಿಮಾನಯಾನ ಕಂಪನಿ ಮತ್ತು ವಿಮಾನ ನಿಲ್ದಾಣದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಘಟನೆಗೆ ಕಾರಣವಾಗಿರುವ ಚಾಲಕನ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದ್ದು, ಪ್ರಾಥಮಿಕ ವಿಚಾರಣೆಯ ಪ್ರಕಾರ, ಅವನು ನಿರಂತರವಾಗಿ ಡ್ಯೂಟಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾರಣ ಕ್ಲಾಂತಿಯು ಮೂಡಿತ್ತು ಎನ್ನಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

