Breaking News

ಸಿಇಟಿ ಪರೀಕ್ಷೆ ಬರೆಯಲು ಆಗಮಿಸಿದ್ದ ವಿದ್ಯಾರ್ಥಿಯ ಜನಿವಾರವನ್ನು ಕತ್ತರಿಸಿದ ಸಿಬ್ಬಂದಿ!!

ಧಾರವಾಡದ ರಾಘವೇಂದ್ರ ನಗರದ ನಂದನ್ ಏರಿ, ವಿದ್ಯಾಗಿರಿ ಬಡಾವಣೆಯಲ್ಲಿರೋ ಜೆಎಸ್​ಎಸ್​ ಕಾಲೇಜಿನಲ್ಲಿ ಪಿಯುಸಿ ಮುಗಿಸಿದ್ದಾರೆ. ಇನ್ನು ಈತ ಏಪ್ರಿಲ್ 16 ರಂದು ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಗರದ ಹುರಕಡ್ಲಿ ಕಾಲೇಜಿನಲ್ಲಿ ಬರೆಯಲು ಹೋಗಿದ್ದ. ಕೇಂದ್ರದ ಹೊರಗಡೆ ಭದ್ರತಾ ಸಿಬ್ಬಂದಿ ಈತನನ್ನು ಪರೀಕ್ಷಿಸುವಾಗ ನಂದನ್ ಧರಿಸಿದ್ದ ಜನಿವಾರ ಕಣ್ಣಿಗೆ ಬಿದ್ದಿದೆ. ಕೂಡಲೇ ಅದನ್ನು ತೆಗೆಯುವಂತೆ ಹೇಳಿದ್ಧಾರೆ. ಆದರೆ ಅದಕ್ಕೆ ನಂದನ್ ವಿರೋಧಿಸಿದ್ದಾನೆ. ಆದರೆ ಅದನ್ನು ಧರಿಸಿದರೆ ಪರೀಕ್ಷಾ ಕೊಠಡಿಗೆ ಬಿಡಲು ಆಗೋದಿಲ್ಲ ಅಂತಾ ಭದ್ರತಾ ಸಿಬ್ಬಂದಿ ಹೇಳಿದ್ದಾರೆ. ಅಷ್ಟೇ ಅಲ್ಲದೇ ಕೂಡಲೇ ಕತ್ತರಿ ತಂದು ಜನಿವಾರ ಕತ್ತರಿಸಿ ವಿದ್ಯಾರ್ಥಿ ಕೈಗೆ ಕೊಟ್ಟಿದ್ದಾರೆ. ಇದರಿಂದ ಶಾಕ್​ಗೆ ಒಳಗಾದ ನಂದನ್ ಏನೊಂದೂ ಮಾತನಾಡಲಾಗದೇ ಪರೀಕ್ಷಾ ಕೇಂದ್ರದೊಳಗೆ ಹೋಗಿದ್ದಾನೆ. ಅಚ್ಚರಿಯ ಸಂಗತಿ ಎಂದರೆ, ಜನಿವಾರವನ್ನು ಕತ್ತರಿಸಿದ ಸಿಬ್ಬಂದಿ ಅದನ್ನು ಆತನ ಕೈಗೆ ಕೊಟ್ಟು ಒಳಗಡೆ ಕಳಿಸಿದ್ದಾರೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *