ಬಳ್ಳಾರಿ ಜಿಲ್ಲೆಯ ಕೊಟ್ಟೂರು ತಾಲ್ಲೂಕಿನ ನಿಂಬಳಗೆರೆ ಸುತ್ತಮುತ್ತ ಹಾಗೂ ಕೋಗಳಿ ಹೋಬಳಿಯಲ್ಲಿ ಶುಕ್ರವಾರ ಉತ್ತಮ ಮಳೆಯಾಯಿತು. ಶಾಂತವೀರಯ್ಯ ಚಿಕ್ಕಯ್ಯನಮಠ ಎಂಬ ಬಾಲಕ ಸಿಡಿಲು ಬಡಿದು ಮೃತಪಟ್ಟಿದ್ದಾನೆ. ಗಿಡಮರಗಳು ಉರುಳಿ ಬಿದ್ದವು. ತಾಲ್ಲೂಕಿನ ಅಲಬೂರು ಗ್ರಾಮದಲ್ಲಿ ಆಕಳೊಂದು ಸಿಡಿಲು ಬಡಿದು ಮೃತಪಟ್ಟಿದೆ. ಕೆ.ಕೋಡಿಹಳ್ಳಿ ಗ್ರಾಮದಲ್ಲಿ ಮನೆ ಮತ್ತು ಬೆಳೆಗಳಿಗೆ ಹಾನಿಯಾಗಿದೆ.
