Breaking News

ಪತ್ನಿಯಿಂದಲೇ ಭೀಕರವಾಗಿ ಕೊಲೆಯಾದ ಕರ್ನಾಟಕದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್.!!

ಕರ್ನಾಟಕದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಓಂ ಪ್ರಕಾಶ್ ಅವರನ್ನು ಅವರ ಪತ್ನಿಯೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ನಿವಾಸದಲ್ಲಿ ನಡೆದಿದೆ. ಓಂ ಪ್ರಕಾಶ್ ಅವರ ಪತ್ನಿಯೇ ಓಂ ಪ್ರಕಾಶ್ ಅವರನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಓಂ ಪ್ರಕಾಶ್ ಅವರು 1981ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿದ್ದ ಓಂ ಪ್ರಕಾಶ್, ಬಳಿಕ 2015ರಲ್ಲಿ ಡಿಜಿ ಮತ್ತು ಐಜಿಪಿಯಾಗಿದ್ದರು. ಅಲ್ಲದೇ ರಾಜ್ಯದ 38ನೇ ಡಿಜಿ ಮತ್ತು ಐಜಿಪಿಯಾಗಿ ಸೇವೆ ಸಲ್ಲಿಸಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಮರಣೋತ್ತರ ಪರೀಕ್ಷೆಗಾಗಿ ಸದ್ಯ ಶವವನ್ನು ಸೈಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಕುರಿತಂತೆ ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *