ಕಳೆದ ಐದು ವರ್ಷಗಳಿಂದ ಸೈರಾಬಾನು, ಮೈಲೇರಿ ಎಂಬಾತನೊಂದಿಗೆ ಪ್ರೀತಿಯಲ್ಲಿದ್ದರು. ಆದರೆ, ಕೆಲ ದಿನಗಳ ಹಿಂದೆ ಇವರ ಸಂಬಂಧ ಮುರಿದುಬಿತ್ತು. ಪೋಷಕರ ಒತ್ತಾಯದ ಮೇರೆಗೆ ಸೈರಾಬಾನು ಬೇರೊಬ್ಬರೊಂದಿಗೆ ಮದುವೆಗೆ ಒಪ್ಪಿಕೊಂಡಿದ್ದರು. ಆದರೆ, ಈ ಮದುವೆ ತಯಾರಿಯನ್ನು ಕಂಡ ಮೈಲೇರಿ, ಸೈರಾಬಾನು ಅವರನ್ನು ಬೆದರಿಕೆಯಿಂದ ಕಾಡತೊಡಗಿದ. ಇಬ್ಬರ ಫೋಟೋಗಳು ಮತ್ತು ವೀಡಿಯೋಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದ ಎಂಬ ಆರೋಪವಿದೆ. ಈ ಬೆದರಿಕೆಯಿಂದ ಮರ್ಯಾದೆಗೆ ಭಯಪಟ್ಟ ಸೈರಾಬಾನು ಆತ್ಮಹತ್ಯೆಗೆ ಶರಣಾದರೆಂದು ಶಂಕಿಸಲಾಗಿದೆ. ಭಾನುವಾರ, ಸೈರಾಬಾನು ಅವರ ಪೋಷಕರು ಮದುವೆ ಸಾಮಗ್ರಿಗಳನ್ನು ಖರೀದಿಸಲು ಪೇಟೆಗೆ ತೆರಳಿದ್ದ ವೇಳೆ, ಡೆತ್‌ನೋಟ್ ಬರೆದಿಟ್ಟು ಅವರು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಘಟನೆಯ ಕುರಿತು ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

