ಕಳೆದ ತಿಂಗಳು ಸಂಸ್ಥೆಯ ಆಂತರಿಕ ಲೆಕ್ಕ ಪರಿಶೋಧನೆಯ ವೇಳೆ, ಎಂಜಿನ್‌ಗಳು ಕಾಣೆಯಾಗಿರುವುದು ತಿಳಿದು ಬಂದಿತ್ತು. ಕಿಯಾ ಮೋಟಾರ್ಸ್ ಅಧಿಕಾರಿಗಳು ಸ್ಥಳೀಯ ಪೊಲೀಸರಿಗೆ ಈ ಸಂಬಂಧ ಅಧಿಕೃತ ದೂರು ನೀಡಿದ್ದರು. ಪ್ರಕರಣ ಕುರಿತು ತನಿಖೆ ನಡೆಸಿದ ಆಂಧ್ರಪ್ರದೇಶ ಪೊಲೀಸರು ಒಂಬತ್ತು ಮಂದಿಯನ್ನು ಬಂಧಿಸಿದ್ದಾರೆ. ಕದ್ದ ಎಂಜಿನ್‌ಗಳನ್ನು ದೇಶದ ಅನೇಕ ರಾಜ್ಯಗಳಿಗೆ ಕಳ್ಳಸಾಗಣೆ ಮಾಡಲಾಗುತ್ತಿತ್ತು. ಆಂಧ್ರಪ್ರದೇಶದ ಗಡಿಯಲ್ಲಿ ಎಂಜಿನ್ ಕಳ್ಳಸಾಗಣೆಯ ಅಕ್ರಮ ಜಾಲ ಕಾರ್ಯನಿರ್ವಹಿಸುತ್ತಿದೆ ಎಂದು ತನಿಖೆ ವೇಳೆ ತಿಳಿದು ಬಂದಿದೆ. ಆರೋಪಿಗಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

