Breaking News

ಕಣ್ಣಿಗೆ ಖಾರದಪುಡಿ ಎರಚಿ, ಕೈಕಾಲು ಕಟ್ಟಿ ಹಾಕಿ 10 ಬಾರಿ ಇರಿದು ಓಂಪ್ರಕಾಶ್ ಹತ್ಯೆ!!

ಓಂ ಪ್ರಕಾಶ್ ಎದೆ, ಹೊಟ್ಟೆಗೆ ಚಾಕುವಿನಿಂದ ಇರಿಯಲಾಗಿದ್ದು, ರಕ್ತದ ಮಡುವಿನಲ್ಲಿ ಒದ್ದಾಡಿ ನಿವೃತ್ತ ಓಂ ಪ್ರಕಾಶ್ ಪ್ರಾಣ ಬಿಟ್ಟಿದ್ದು, ಗಂಡನ ಉಸಿರು ನಿಲ್ಲುವವರೆಗೂ ಪತ್ನಿ ಕಾದು ನಿಂತಿದ್ದರು.ಕಣ್ಣಿಗೆ ಖಾರದಪುಡಿ ಎರಚಿ, ಮೈಮೇಲೆ ಎಣ್ಣೆ ಸುರಿದು, ಕೈಕಾಲು ಕಟ್ಟಿ ಹಾಕಿ ಎಂಟರಿಂದ ಹತ್ತು ಬಾರಿ ಇರಿದು ನಿವೃತ್ತ ಡಿಜಿ ಐಜಿಪಿ ಓಂ ಪ್ರಕಾಶ್ ಅವರನ್ನು ಕೊಲೆ ಮಾಡಲಾಗಿದೆ.ಓಂ ಪ್ರಕಾಶ್ ಪದ್ಮಿನಿ ಮತ್ತು ಪುತ್ರಿ ಕೃತಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು, ವಿಚಾರಣೆಯ ನಂತರ ಮಹಿಳಾ ಸಾಂತ್ವಾನ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ. ಅವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಸೇಂಟ್ ಜಾನ್ಸ್ ಆಸ್ಪತ್ರೆಗೆ ಮೃತ ದೇಹವನ್ನು ರವಾನೆ ಮಾಡಲಾಗಿದ್ದು, ಇಂದು ಬೆಳಿಗ್ಗೆ ಮರಣೋತ್ತರ ಪರೀಕ್ಷೆ ನಡೆಯಲಿದೆ. ಮರಣೋತ್ತರ ಪರೀಕ್ಷೆ ನಂತರ ಕುಟುಂಬದವರಿಗೆ ಮೃತದೇಹ ಹಸ್ತಾಂತರ ಮಾಡಲಾಗುವುದು. ನಿನ್ನೆ ಸಂಜೆಯೇ ಮೃತದೇಹವನ್ನು ಸೇಂಟ್ ಜಾನ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *