Breaking News

ಮುತ್ತಪ್ಪ ರೈ ಪುತ್ರ ‘ರಿಕ್ಕಿ ರೈ’ ಮೇಲೆ ಫೈರಿಂಗ್ ಕೇಸ್ : ಗನ್ ಮ್ಯಾನ್ ಅರೆಸ್ಟ್!!

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗನ್ ಮ್ಯಾನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಬಿಡದಿ ಪೊಲೀಸರು ರಿಕ್ಕಿ ರೈ ಗನ್ ಮ್ಯಾನ್ ವಿಠ್ಠಲ್ ರಾವ್ ನ್ನು ಬಂಧಿಸಿದ್ದಾರೆ. ಹೆಚ್ಚಿನ ತನಿಖೆ ಅಗತ್ಯವಿರುವ ಹಿನ್ನೆಲೆ ರಿಕ್ಕಿ ರೈ ಗನ್ ಮ್ಯಾನ್ ನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ರೈ ಮೇಲಿನ ಶೂಟೌಟ್ ಪ್ರಕರಣ ಸಂಬಂಧ ಅವರ ಕಾರು ಚಾಲಕ ಬಸವರಾಜು ನೀಡಿದ ದೂರಿನ ಮೇರೆಗೆ ಬಿಡದಿ ಪೊಲೀಸ್ ಠಾಣೆಯಲ್ಲಿ ಮುತ್ತಪ್ಪ ರೈ ಎರಡನೇ ಪತ್ನಿ ಅನುರಾಧಾ ರೈ ಮೇಲೂ ಪ್ರಕರಣ ದಾಖಲಾಗಿತ್ತು.ವಿಠ್ಠಲ ಬಹುಕಾಲದವರೆಗೆ ರಿಕ್ಕಿ ರೈನ ಗನ್ ಮ್ಯಾನ್ ಆಗಿದ್ದ. ಅನಾರೋಗ್ಯ ಹಿನ್ನೆಲೆ ರಿಕ್ಕಿ ಫಾರ್ಮ್ ಹೌಸ್ ನಲ್ಲಿ ಸೆಕ್ಯೂರಿಟಿ ಕೆಲಸ ಮಾಡಿಕೊಂಡಿದ್ದಾನೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *