ಸಹೋದ್ಯೋಗಿ ಸಹಾಯಕ ಪೊಲೀಸ್ ಇನ್ಸ್ಪೆಕ್ಟರ್ ಅಶ್ವಿನಿ ಬಿದ್ರೆ-ಗೋರೆ ಅವರನ್ನು ಹತ್ಯೆ ಮಾಡಿ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಎಸೆದ ಆರೋಪದಲ್ಲಿ ವಜಾಗೊಂಡಿರುವ ಪೊಲೀಸ್ ಅಧಿಕಾರಿ ಅಭಯ್ ಕುರುಂಡ್ಕರ್ ಗೆ ಜೀವಾವಧಿ ಶಿಕ್ಷೆ ನೀಡಿ ಇಲ್ಲಿನ ನ್ಯಾಯಾಲಯ ತೀರ್ಪು ನೀಡಿದೆ.ತನಿಖೆಯಲ್ಲಿ ನವಿ ಮುಂಬೈ ಪೊಲೀಸರು ಪ್ರಾಮಾಣಿಕ ಕ್ರಮ ಕೈಗೊಂಡಿಲ್ಲ ಎಂದು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಕೆ.ಜಿ.ಪಲ್ದೇವಾರ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದು, ಇಡೀ ವ್ಯವಸ್ಥೆ ಕುರುಂಡ್ಕರ್ ಅವರ ಪರವಾಗಿ ನಿಂತಿದೆ ಎಂದು ಆಕ್ಷೇಪಿಸಿದರು. ತನಿಖಾ ದೋಷಗಳ ಬಗ್ಗೆ ಇಬ್ಬರು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆಯೂ ಪೊಲೀಸ್ ಮುಖ್ಯಸ್ಥರಿಗೆ ಸೂಚಿಸಲಾಗಿದೆ.ಕೃತ್ಯಕ್ಕೆ ನೆರವಾದ ಆರೋಪದಲ್ಲಿ ಚಾಲಕ ಕುಂದನ್ ಭಂಡಾರಿ ಮತ್ತು ಸ್ನೇಹಿತ ಮಹೇಶ್ ಫಳ್ನೀಕರ್ ಅವರಿಗೆ ತಲಾ 7 ವರ್ಷಗಳ ಜೈಲುಶಿಕ್ಷೆ ವಿಧಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

