Breaking News

ಸರ್ಕಾರಿ ಗೌರವದೊಂದಿಗೆ ಕರ್ನಾಟಕ ಮಾಜಿ ಡಿಜಿಪಿ ಓಂ ಪ್ರಕಾಶ್ ಅಂತ್ಯಕ್ರಿಯೆ..

ಪತ್ನಿ ಮತ್ತು ಮಗಳಿಂದ ಹತ್ಯೆಗೀಡಾದ ರಾಜ್ಯದ ಮಾಜಿ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರ ಅಂತ್ಯಕ್ರಿಯೆ ಸೋಮವಾರ ಬೆಂಗಳೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು. ಸಂಜೆ ವಿಲ್ಸನ್ ಗಾರ್ಡನ್ ಸ್ಮಶಾನದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.ಪೊಲೀಸ್ ಪಡೆಯಿಂದ ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಓಂ ಪ್ರಕಾಶ್ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಲಾಯಿತು. ಬಳಿಕ ಪುತ್ರ ಕಾರ್ತಿಕೇಶ್ ಅಂತಿಮ ವಿಧಿ-ವಿಧಾನ ನೆರವೇರಿಸಿ ಪಾರ್ಥಿವ ಶರೀರಕ್ಕೆ ಅಗ್ನಿಸ್ಪರ್ಶ ಮಾಡಿದರು.ಮಾಜಿ ಡಿಜಿಪಿಯ ಸಂಬಂಧಿಕರು, ಸ್ನೇಹಿತರು ಹಾಗೂ ಹಲವು ಗಣ್ಯರು ಅಂತಿಮ ನಮನ ಸಲ್ಲಿಸದರು.ಬಿಹಾರದ ಚಂಪಾರಣ್ ಮೂಲದ ಓಂ ಪ್ರಕಾಶ್ ಅವರು ಭೂವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಮಾರ್ಚ್ 1, 2015 ರಂದು ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕಗೊಂಡಿದ್ದರು.

Share News

About BigTv News

Check Also

ಅಯ್ಯೋ ಪಾಪ ಅಂದಿದ್ದೇ ತಪ್ಪಾಯ್ತು: ಎಂಬಿಬಿಎಸ್ ವಿದ್ಯಾರ್ಥಿನಿ ಸ್ನೇಹಿತೆಯ ಸೋಗಿನಲ್ಲಿ ಒಂದು ಲಕ್ಷ ರೂ. ವಂಚನೆ!

ವಿದೇಶದಲ್ಲಿ ಎಂಬಿಬಿಎಸ್‌ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯ ಕಾಲೇಜು ಶುಲ್ಕ ಪಾವತಿಸುವ ತುರ್ತು ಪರಿಸ್ಥಿತಿಯನ್ನು ಬಳಸಿಕೊಂಡು ಸೈಬರ್ ವಂಚಕರು ಬೆಂಗಳೂರಿನ ಕುಟುಂಬವೊಂದಕ್ಕೆ …

Leave a Reply

Your email address will not be published. Required fields are marked *