ದೇಶ ಕಾಯುವ ಸೈನಿಕನ ಮೇಲೆ ಹಲ್ಲೆ ನಡೆದಿದ್ದರಿಂದ ಈ ಪ್ರಕರಣ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು. ಹೀಗಾಗಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಮೊದಲಿಗೆ ಬೈಕ್ ಸವಾರ ತನ್ನ ಮೇಲೆ ಹಲ್ಲೆ ಮಾಡಿದ್ದರು ಎಂದು ವಾಯುಸೇನೆ ಅಧಿಕಾರಿ ಆರೋಪಿಸಿದ್ದರು. ಆದರೆ, ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಇಬ್ಬರ ನಡುವೆ ಜಗಳ ನಡೆದಾಗ ಅಧಿಕಾರಿ ಕೂಡ ಬೈಕ್ ಸವಾರನ ಮೇಲೆ ಹಲ್ಲೆ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ವಿಕಾಸ್ ಕುಮಾರ್ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.ಹಲ್ಲೆಯಿಂದ ಮುಖ ಹಾಗೂ ಕತ್ತಿನ ಭಾಗದಿಂದ ರಕ್ತ ಸೋರುತ್ತಿರುವ ನಡುವೆಯೇ ವಿಡಿಯೋ ಮಾಡಿದ್ದ ಐಎಎಫ್ ಅಧಿಕಾರಿ, ನಾವು ಕಾರಿನಲ್ಲಿ ಹೋಗುವಾಗ ಬೈಕ್‌ನಲ್ಲಿ ಹಿಂದಿನಿಂದ ಬಂದ ಒಬ್ಬ ವ್ಯಕ್ತಿ ನಮ್ಮ ಕಾರನ್ನು ನಿಲ್ಲಿಸಿ, ಏಕಾಏಕಿ ಕನ್ನಡದಲ್ಲಿ ಅವಾಚ್ಯ ಶಬ್ದಗಳಿಂದ ಬೈಯಲು ಶುರು ಮಾಡಿದ. ಕಾರಿನ ಮೇಲಿನ ಸ್ಟಿಕ್ಕರ್ ನೋಡಿ ನೀವು ಡಿಆರ್‌ಡಿಒಗೆ ಸೇರಿದವರಾ? ಎಂದು ಕೇಳಿದ. ಈ ವೇಳೆ ನಾನು ಕೆಳಗಿಳಿದಾಗ, ವ್ಯಕ್ತಿಯೊಬ್ಬ ನನ್ನ ಮೇಲೆ ಬೈಕ್ ಕೀಯಿಂದ ಹಲ್ಲೆ ನಡೆಸಿದ್ದಾನೆ ಎಂದು ತಿಳಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

