Breaking News

ಪ್ರವಾಸಿಗರ ಮೇಲೆ ಉಗ್ರರ ಕ್ರೌರ್ಯ: ಕನ್ನಡಿಗ ಮಂಜುನಾಥ್ ಸಾವು!!

ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕ್ ಮೂಲದ ಭಯೋತ್ಪಾದಕರು ದುಷ್ಕೃತ್ಯ ಎಸಗಿದ್ದಾರೆ. ಯಾವ ಧರ್ಮ ಅಂತ ಕೇಳಿ ಹಿಂದೂ ಪ್ರವಾಸಿಗರ ಮೇಲೆ ಗುಂಡಿನ ದಾಳಿಯ ಮೂಲಕ ಕೃತ್ಯ ಎಸಗಿದ್ದಾರೆ. ಮಿನಿ ಸ್ವಿಟ್ಜರ್ಲ್ಯಾಂಡ್ ಎಂದೇ ಹೆಸರಾಗಿರುವ ಪಹಲ್ಗಾಮ್ ನ ಬೈಸರನ್ ಕಣಿವೆಯಲ್ಲಿ ಟ್ರಕಿಂಗ್ ಗೆ ಹೋಗಿದ್ದ ಪ್ರವಾಸಿಗರ ಮೇಲೆ ಉಗ್ರರು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ.
ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಮಂಜುನಾಥ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಆದರೆ ಗುಂಡಿನ ದಾಳಿಯಲ್ಲಿ ಮಂಜುನಾಥ್ ಅವರ ಪತ್ನಿ ಪಲ್ಲವಿ ಮತ್ತು ಮಗ ಸುರಕ್ಷಿತವಾಗಿದ್ದಾರೆ. ಇನ್ನು ಏಳು ಮಂದಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳಾಂತರಿಸಲು ಆಯಂಬುಲೆನ್ಸ್ ಗಳನ್ನು ರವಾನಿಸಲಾಗಿದೆ. ಉಗ್ರರಿಂದ ದಾಳಿಯಾಗುತ್ತಿದ್ದಂತೆ ಭಾರತೀಯ ಸೇನೆ ಪ್ರದೇಶವನ್ನು ಸುತ್ತುವರೆದಿದ್ದು ಕಾರ್ಯಾಚರಣೆ ನಡೆಸುತ್ತಿದ್ದಾರೆ.

Share News

About BigTv News

Check Also

ಟಿ. ನರಸೀಪುರ: ಹಾಡಹಗಲೇ ಯುವಕನ ಬರ್ಬರ ಕೊಲೆ; ಠಾಣೆಗೆ ಹಾಜರಾದ ಮೂವರು ಆರೋಪಿಗಳು

ಟಿ.ನರಸೀಪುರದ ವಿವೇಕನಗರದಲ್ಲಿ ಶನಿವಾರ ಬೆಳಗ್ಗೆ 9.30ರ ಸುಮಾರಿಗೆ ಸುಭಾಷ್ (34) ಎಂಬ ಯುವಕನನ್ನು ಮೂವರು ಆರೋಪಿಗಳು ಡ್ರ್ಯಾಗರ್‌ ಮತ್ತು ಚೂರಿಯಿಂದ …

Leave a Reply

Your email address will not be published. Required fields are marked *