ಕೊರಳಲ್ಲಿದ್ದ ಮಂಗಳಸೂತ್ರ, ಕಿವಿಯೊಲೆ, ಕೈಯಲ್ಲಿ ಬಂಗಾರ ಉಂಗುರ ಕದ್ದು,ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಇಲ್ಲಿನ ಗಣೇಶಪುರದ ಲಕ್ಷ್ಮೀ ನಗರದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.ಆಟೋ ಚಲಾಯಿಸಿ ಜೀವನ ಸಾಗಿಸುತ್ತಿದ್ದ ಅಜೀತ್ ದಡ್ಡೀಕರ್ ನಿನ್ನೆ ಕೆಲಸ ಮುಗಿಸಿ ಸಂಜೆ ಮನೆಗೆ ವಾಪಸ್ ಬಂದಾಗ ಕೊಲೆಯಾಗಿರೋ ಪ್ರಕರಣ ಬೆಳಕಿಗೆ ಬಂದಿದೆ. ಪ್ರಜ್ಞೆತಪ್ಪಿ ಬಿದ್ದಿದ್ದ ಅಂಜನಾರನ್ನ ಬೆಳಗಾವಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅಂಜನಾ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಕ್ರೈಮ್ ಡಿಸಿಪಿ ನಿರಂಜನರಾಜೆ ಅರಸ್,ಕ್ಯಾಂಪ್ ಪೊಲೀಸ ಠಾಣಾ ಸಿಪಿಐ ಆಲ್ತಾಫ್ ಮುಲ್ಲಾ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಬೆಳಗಾವಿ ಕ್ಯಾಂಪ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news

