Breaking News

ಪೈಶಾಚಿಕ ಕೃತ್ಯ : 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಆರೋಪಿ ಅರೆಸ್ಟ್!

ಮಂಗಳೂರಿನಲ್ಲಿ ಬಾಲಕಿಯ ಅಮ್ಮನ ಸ್ನೇಹಿತೆಯ ಮನೆಯಲ್ಲಿ ನಡೆದಿದ್ದು, ಆರೋಪಿ ಬಾಲಕಿಯ ಖಾಸಗಿ ಫೋಟೋಗಳು ಮತ್ತು ವೀಡಿಯೋಗಳನ್ನು ಬಳಸಿಕೊಂಡು ಆಕೆಯನ್ನು ಬ್ಲಾಕ್‌ಮೇಲ್ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಘಟನೆಯ ಬಳಿಕ, ಧನಂಜಯ ಬಾಲಕಿಯನ್ನು ಬೆದರಿಸಿ ಬೆಂಗಳೂರಿಗೆ ಬಂದು ಬಾಲಕಿಯನ್ನ ಕರೆದುಕೊಂಡು ಹೋಗಿದ್ದ. ಆನಂತರ, ಸಕಲೇಶಪುರದ ಒಂದು ತೋಟದಲ್ಲಿ ಆಕೆಯನ್ನು ಬಚ್ಚಿಟ್ಟು, ನಿರಂತರವಾಗಿ ಅತ್ಯಾಚಾರವನ್ನು ಮುಂದುವರೆಸಿದ್ದಾನೆ ಎಂದು ತಿಳಿದುಬಂದಿದೆ. ಬಾಲಕಿಯು ತನ್ನ ದುಃಸ್ಥಿತಿಯನ್ನು ಪೋಷಕರಿಗೆ ತಿಳಿಸಿದ ನಂತರ, ಅವರು ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು. ವೈದ್ಯಕೀಯ ತಪಾಸಣೆಯಿಂದ ಅತ್ಯಾಚಾರದ ಆರೋಪ ದೃಢಪಟ್ಟಿದ್ದು, ಸೋಲದೇವನಹಳ್ಳಿ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಆರೋಪಿ ಧನಂಜಯನನ್ನು ಬಂಧಿಸಿದರು. ಲೈಂಗಿಕ ಅಪರಾಧಗಳಿಂದ ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆಯನ್ನು ಮುಂದುವರೆಸಿದ್ದಾರೆ

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *