ಪ್ರವಾಸಿಗರನ್ನು ಕರೆದುಕೊಂಡು ಸಾಗುತ್ತಿದ್ದ ಒಂದು ಖಾಸಗಿ ಬಸ್, ತಿರುವಿನಲ್ಲಿ ಬ್ರೇಕ್ ಫೇಲ್ ಆಗಿ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹಳ್ಳಕ್ಕೆ ಉರುಳಿಬಿದ್ದಿದೆ. ಬಸ್ ಪೂರ್ತಿಯಾಗಿ ಹಳ್ಳದಲ್ಲಿ ನುಗ್ಗಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದವರ ಮೇಲೆ ಭಾರೀ ಆಘಾತ ಬೀರಿದೆ. ಪರಿಣಾಮ 25ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಅಪಘಾತದ ತಕ್ಷಣದ ನಂತರ ಸ್ಥಳೀಯರು ಹಾಗೂ ಪೊಲೀಸರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು, ಗಾಯಾಳುಗಳನ್ನು ಕನಕಪುರದ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಕೆಲವರ ಸ್ಥಿತಿ ಗಂಭೀರವಾಗಿರುವ ಕಾರಣ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ನಗರದಲ್ಲಿನ ವಿವಿಧ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

