ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಿನ್ನೆ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರವನ್ನು ಜಮ್ಮು-ಕಾಶ್ಮೀರ ಸರ್ಕಾರ ಘೋಷಿಸಿದೆ. ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ, ಸಣ್ಣಪುಟ್ಟ ಗಾಯಾಳುಗಳಿಗೆ 1 ಲಕ್ಷ ರೂಪಾಯಿ ನೀಡುವುದಾಗಿ ತಿಳಿಸಿದೆ.ಉಗ್ರರ ದಾಳಿಯಿಂದ ಪ್ರಾಣ ಕಳೆದುಕೊಂಡ 26 ಮಂದಿಯ ಪಾರ್ಥಿವ ಶರೀರಗಳನ್ನು ಶ್ರೀನಗರದ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದೆ. ನಂತರ ಪೊಲೀಸ್ ನಿಯಂತ್ರಣ ಕೊಠಡಿಗೆ ಕೊಂಡೊಯ್ಯಲಾಯಿತು. ಗೃಹ ಸಚಿವ ಅಮಿತ್ ಶಾ ಸಂತಾಪ ಸೂಚಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

