Breaking News

ಹೊನ್ನಾವರ: ಸಾರಿಗೆ ಬಸ್-ಕಾರು ಡಿಕ್ಕಿ, ಇಬ್ಬರ ದುರ್ಮರಣ, 10 ಮಂದಿಗೆ ಗಾಯ!!

ಭಟ್ಕಳದಿಂದ ಶಿರಸಿ ಮಾರ್ಗವಾಗಿ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ಬೆಂಗಳೂರಿನಿಂದ ಮುರುಡೇಶ್ವರಕ್ಕೆ ಮದುವೆಗೆ ತೆರಳುತ್ತಿದ್ದ ಬೆಂಗಳೂರು ಮೂಲದ ಸ್ಕಾರ್ಪಿಯೋ ಕಾರಿನ ನಡುವೆ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ ಸ್ಕಾರ್ಪಿಯೋದಲ್ಲಿದ್ದ ಆರು ಜನರ ಪೈಕಿ ಇಬ್ಬರು ಮೃತಪಟ್ಟಿದ್ದು, ಉಳಿದವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಬಸ್ ಚಾಲಕನಿಗೂ ಗಂಭೀರ ಗಾಯಗಳಾಗಿದ್ದು, ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಸ್ಕಾರ್ಪಿಯೋ ಕಾರು ನುಜ್ಜುಗುಜ್ಜಾಗಿದ್ದು, ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *