ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 79 ಅಂಕ ಬಂದಿದ್ದರೂ ಕಡಿಮೆ ಎಂದು ಮನನೊಂದು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಜಿಲ್ಲೆಯ ಅರಸೀಕೆರೆ ನಗರದಲ್ಲಿ ನಡೆದಿದೆ. ಇಲ್ಲಿನ ಶಿಕ್ಷಕ ಪ್ರಕಾಶ್ ಅವರ ಪುತ್ರ 18 ವರ್ಷದ ಮನೋಜ್ ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿ.ಮನೋಜ್ ಅರಸೀಕೆರೆ ನಗರದ ಅನಂತ ಪಿಯು ಕಾಲೇಜಿನಲ್ಲಿ ಪಿಸಿಎಂಬಿ ಸೈನ್ಸ್ ವಿಭಾಗದಲ್ಲಿ ಅಭ್ಯಾಸ ಮಾಡುತ್ತಿದ್ದ. ಹೆಚ್ಚಿನ ಅಂಕ ಪಡೆಯುವ ನಿಟ್ಟಿನಲ್ಲಿ ಸಾಕಷ್ಟು ಪರಿಶ್ರಮ ಕೂಡ ವಹಿಸಿದ್ದ ಮನೋಜ್, ಫಲಿತಾಂಶ ಪ್ರಕಟವಾದಾಗ ಕಡಿಮೆ ಅಂಕ ಬಂದಿದೆ ಎಂದು ಆಘಾತಗೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

