Breaking News

ಬೆಂಗಳೂರು: ಮಂಜುನಾಥ್, ಭರತ್ ಮೃತದೇಹ,ಆಂಬುಲೆನ್ಸ್ ನಲ್ಲಿ ಸ್ವಗೃಹಕ್ಕೆ ರವಾನೆ!!

ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟ ಕರ್ನಾಟಕದ ಮಂಜುನಾಥ್ ಮತ್ತು ಭರತ್ ಭೂಷಣ್ ಅವರ ಮೃತದೇಹಗಳನ್ನು ದೆಹಲಿಯಿಂದ ಬೆಂಗಳೂರುಗೆ ವಿಮಾನದ ಮೂಲಕ ತರಲಾಗಿದೆ.ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೃತದೇಹಗಳನ್ನ ತಂದು ಅಲ್ಲಿಂದ ಆಂಬುಲೆನ್ಸ್ ನಲ್ಲಿ ಸ್ವಗೃಹಕ್ಕೆ ಕೊಂಡೊಯ್ಯಲಾಗಿದೆ.ಬೆಳಗ್ಗೆ 9 ಗಂಟೆಗೆ ಮಂಜುನಾಥ್ ನಿವಾಸದಲ್ಲಿ ಅಂತಿಮ ವಿಧಿ ವಿಧಾನಗಳು ನಡೆಯಲಿದ್ದು, ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಂಗಳೂರಿನ ಮತ್ತಿಕೆರೆಯ ನಿವಾಸಕ್ಕೆ ಭರತ್ ಭೂಷಣ್ ಮೃತದೇಹ ಕೊಂಡೊಯ್ದು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬ್ಯಾರಿಕೇಡ್ ಅಳವಡಿಸಿ ಪೊಲೀಸರು ದರ್ಶನಕ್ಕೆ ವ್ಯವಸ್ಥೆ ಮಾಡಿದ್ದು, ಮನೆ, ಸುತ್ತಲಿನ ರಸ್ತೆಯ ಬಳಿ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *