ದ್ವಿಚಕ್ರ ವಾಹನದಲ್ಲಿ ಹೊರವರ್ತುಲ ರಸ್ತೆಯ ಕೂಲಿನಗರ ಸೇತುವೆ ಬಳಿ ಬರುತ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನ ರಸ್ತೆಯ ಎಡಭಾಗದ ಪಾದಚಾರಿ ಮಾರ್ಗಕ್ಕೆ ಡಿಕ್ಕಿ ಹೊಡೆದು ಬಳಿಕ ಮರಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಇಬ್ಬರು ಸವಾರರು ದ್ವಿಚಕ್ರ ವಾಹನ ಸಹಿತ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಸವಾರ ನಿತಿನ್ ತಲೆಗೆ ಗಂಭೀರ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಿಂಬದಿ ಸವಾರ ಹೃದಯ್‌ನನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ ಸಾಗಿಸಿದ್ದಾರೆ ಎಂದು ಸಂಚಾರ ಪೊಲೀಸರು ವಿವರಿಸಿದರು. ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಸಂಚಾರ ಪೊಲೀಸರು ಪರಿಶೀಲಿಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ದ್ವಿಚಕ್ರ ವಾಹನವನ್ನು ಅತಿವೇಗವಾಗಿ ಚಲಾಯಿಸಿದ ಪರಿಣಾಮ ನಿಯಂತ್ರಣ ತಪ್ಪಿ ಅಪಘಾತವಾಗಿರುವ ಶಂಕೆ ವ್ಯಕ್ತವಾಗಿದೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು. ಈ ಸಂಬಂಧ ರಾಜಾಜಿನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

