ಬುಕ್ಕಾಪಟ್ಟಣದ ಪಾನಿಪೂರಿ ಅಂಗಡಿಯೊಂದರಲ್ಲಿ ಪಾನಿಪುರಿ ತಿಂದ 25ಕ್ಕೂ ಹೆಚ್ಚು ಮಂದಿಗೆ ಹೊಟ್ಟೆ ನೋವು, ವಾಂತಿ, ಭೇದಿ ಕಾಣಿಸಿಕೊಂಡಿದೆ. ಬುಕ್ಕಾಪಟ್ಟಣ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ.ಜಿಲ್ಲಾ ಆಹಾರ ಗುಣಮಟ್ಟ ಸುರಕ್ಷತೆ ಅಧಿಕಾರಿ ಚಂದ್ರಪ್ಪ ಅವರು ಗ್ರಾಮಕ್ಕೆ ಭೇಟಿ ನೀಡಿ ಅಂಗಡಿ ಮಾಲೀಕನನ್ನು ಕರೆಸಿ ನೋಟಿಸ್ ನೀಡಿದ್ದಾರೆ.ಹಿಂದೆ ಒಂದು ಬಾರಿ ಸ್ಥಳಕ್ಕೆ ಭೇಟಿ ನೀಡಿ ಎಚ್ಚರಿಕೆ ನೀಡಿ ನೋಟಿಸ್ ನೀಡಿದ್ದರೂ ಈತ ಸ್ವಚ್ಛತೆ ಹಾಗೂ ಆಹಾರ ಸುರಕ್ಷತೆ ಬಗ್ಗೆ ಗಮನ ಹರಿಸಿಲ್ಲ. ಆಹಾರದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಿದ್ದು, ಫಲಿತಾಂಶ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಗುಣಮಟ್ಟ ಸುರಕ್ಷತೆ ಅಧಿಕಾರಿ ಚಂದ್ರಪ್ಪ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

